ಸಾಗರ: ನಗರ ವ್ಯಾಪ್ತಿಯಲ್ಲಿ ಇತ್ತೀಚಿನ ದಿನಗಳಲ್ಲಿ ಅಂಗಡಿ ಮುಂಗಟ್ಟುಗಳ ಮೇಲೆ ಕನ್ನಡ ಬರಹವನ್ನು ಮುಚ್ಚುಮರೆ ಆಗಿದ್ದು ಸರ್ಕಾರದ ಆದೇಶ ಇದ್ದರು ಆಂಗ್ಲ ಭಾಷೆಗೆ ಅವಕಾಶ ಕಲ್ಪಿಸಿಕೊಡಲಾಗಿದ್ದು ತಕ್ಷಣ ನಗರದಲ್ಲಿ ಇರುವ ಆಂಗ್ಲ ಭಾಷೆಯ ನಾಮಫಲಕ ತೆರವುಗೊಳಿಸುವಂತೆ ಆಗ್ರಹಿಸಿ ಮಂಗಳವಾರ ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದ ತಾಲೂಕು ಅಧ್ಯಕ್ಷ ಜೈರಾಮ್ ಸೂರನಗದ್ದೆ ನೇತೃತ್ವದಲ್ಲಿ ಸಾಗರ ನಗರಸಭೆಯ ಆಯುಕ್ತರಿಗೆ ಮನವಿ ಸಲ್ಲಿಸಿದರು.
ನಗರದಲ್ಲಿ ಇರುವ ಅಂಗಡಿ ಮುಂಗಟ್ಟುಗಳ ಮೇಲೆ ಆಂಗ್ಲ ಭಾಷೆಯ ನಾಮಫಲಕಗಳು ಇದ್ದು ತಕ್ಷಣ ತಿರುಗುಗಳಿಸುವಂತೆ ಅನೇಕ ಸಲ ಬಾರಿ ಮನೆ ಮಾಡಲಾಗಿದೆ. ಆದರೆ ಇಲ್ಲಿಯವರೆಗೆ ನಗರಸಭೆ ವತಿಯಿಂದ ಯಾವುದೇ ಕ್ರಮ ಕೈಗೊಳ್ಳಲಿಲ್ಲ ಈ ಹಿನ್ನಲೆಯಲ್ಲಿ ಇಂದು ಪ್ರತಿಭಟನೆ ನಡೆಸಿ ಆಯುಕ್ತರಿಗೆ ಮನವಿ ಸಲ್ಲಿಸಿದ್ದೇವೆ ತಕ್ಷಣ ಆಂಗ್ಲ ನಾಮಫಲಕಗಳನ್ನು ತೆಗೆಯದೆ ಹೋದಲ್ಲಿ ಮುಂದಿನ ದಿನಗಳಲ್ಲಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
Kshetra Samachara
24/12/2024 03:06 pm