ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾಗರ: ಕುವೆಂಪು ವಿವಿಯಲ್ಲಿ ಭ್ರಷ್ಟಾಚಾರ ಅರೋಪ ರಸ್ತೆ ತಡೆ ನಡೆಸಿ ವಿದ್ಯಾರ್ಥಿಗಳ ಪ್ರತಿಭಟನೆ

ಸಾಗರ : ಕುವೆಂಪು ವಿಶ್ವವಿದ್ಯಾಲಯದ ಭ್ರಷ್ಟಾಚಾರ ಹಾಗೂ ಅಸಮರ್ಪಕ ಆಡಳಿತವನ್ನು ಖಂಡಿಸಿ ಮಂಗಳವಾರ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನಿಂದ ಪ್ರತಿಭಟನೆ ನಡೆಸಿ ಉಪವಿಭಾಗಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.

ಕಾಲೇಜಿನ ವಿದ್ಯಾರ್ಥಿಗಳಿಗೆ ಅಂಕಪಟ್ಟಿಯನ್ನು ನಿಗಧಿತ ಸಮಯಕ್ಕೆ ನೀಡುತ್ತಿಲ್ಲ. ಇದರಿಂದ ಉನ್ನತ ವಿದ್ಯಾಭ್ಯಾಸಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ತೀವೃ ತೊಂದರೆಯಾಗುತ್ತಿದೆ. ಏಕರೂಪ ವೇಳಾಪಟ್ಟಿ ಕುರಿತು ರಾಜ್ಯ ಸರ್ಕಾರದ ನಿರ್ದೇಶನ ಇದ್ದರೂ ಅದು ಸಮರ್ಪಕವಾಗಿ ನಿರ್ವಹಣೆ ಮಾಡುತ್ತಿಲ್ಲ ಎಂದು ಮನವಿಯಲ್ಲಿ ಹೇಳಲಾಗಿದೆ.

ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದರೂ ಅದನ್ನು ಪರಿಹರಿಸುವ ಪರಿಣಾಮಕಾರಿ ಕೆಲಸ ನಡೆಯುತ್ತಿಲ್ಲ. ತಕ್ಷಣ ವಿದ್ಯಾರ್ಥಿ ಪರಿಷತ್ ಬೇಡಿಕೆ ಈಡೇರಿಸದೆ ಹೋದಲ್ಲಿ ಮುಂದಿನ ದಿನಗಳಲ್ಲಿ ಉಗ್ರವಾದ ಪ್ರತಿಭಟನೆ ಹಮ್ಮಿಕೊಳ್ಳುವ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಎಬಿವಿಪಿ ನಗರ ಕಾರ್ಯದರ್ಶಿ ವಿಜಯ ಎನ್. ಮಾತನಾಡಿದರು. ಉಪವಿಭಾಗಾಧಿಕಾರಿ ಯತೀಶ್ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿ ಸ್ಪಂದಿಸುವ ಭರವಸೆ ನೀಡಿದರು. ವಿದ್ಯಾರ್ಥಿ ಪರಿಷತ್ ಪ್ರಮುಖರು, ವಿದ್ಯಾರ್ಥಿಗಳು ಹಾಜರಿದ್ದರು

Edited By : PublicNext Desk
Kshetra Samachara

Kshetra Samachara

24/12/2024 03:29 pm

Cinque Terre

3.32 K

Cinque Terre

0

ಸಂಬಂಧಿತ ಸುದ್ದಿ