ಮುಲ್ಕಿ: ಸರಕಾರಿ ಶಾಲೆಗಳೆಂಬ ಕೀಳರಿಮೆ ಬಿಟ್ಟು ಉತ್ತಮ ಶಿಕ್ಷಣ ಪಡೆದು ಕೀರ್ತಿವಂತರಾಗಿ ಎಂದು ಮುಲ್ಕಿ ನಗರ ಪಂಚಾಯತ್ ಅಧ್ಯಕ್ಷ ಸತೀಶ್ ಅಂಚನ್ ಹೇಳಿದರು.
ಅವರು ಮುಲ್ಕಿ ಸರಕಾರಿ ಪದವಿಪೂರ್ವ ಕಾಲೇಜು ಹಾಗೂ ಪ್ರೌಢ ಶಾಲೆಯ ವಾರ್ಷಿಕೋತ್ಸವದ ಅಧ್ಯಕ್ಷತೆ ವಹಿಸಿ ಮಾತನಾಡಿದರು,
ವೇದಿಕೆಯಲ್ಲಿ ಮುಖ್ಯ ಅತಿಥಿಗಳಾಗಿ ಮುಲ್ಕಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಅನಿತಾ ರವರು ಅಪರಾಧ ತಡೆ ಮಾಸಾಚರಣೆ ಬಗ್ಗೆ ಮಾತನಾಡಿ ಮಕ್ಕಳು ಸಾಮಾಜಿಕ ಜಾಲತಾಣದಲ್ಲಿ ಜಾಗೃತರಾಗಿ , ಮೊಬೈಲ್ ಬಳಕೆ ನಿಯಂತ್ರಣದಲ್ಲಿಟ್ಟು ಅಪರಾಧ ಮುಕ್ತ ಸಮಾಜಕ್ಕೆ ಪಣತೊಡಬೇಕಾಗಿದೆ ಎಂದರು.
ವೇದಿಕೆಯಲ್ಲಿ ಮುಲ್ಕಿ ನ.ಪಂ. ಸದಸ್ಯ ಹರ್ಷರಾಜ ಶೆಟ್ಟಿ, ಕಾಲೇಜು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಅಶೋಕ್ ಕುಮಾರ್ ಶೆಟ್ಟಿ, ಉದ್ಯಮಿ ಹರೀಶ್ ಪುತ್ರನ್, ಪ್ರೌಢಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷೆ ಯೋಗಿನಿ, ಕಾಲೇಜು ಪ್ರಾಂಶುಪಾಲ ಡಾ. ವಾಸುದೇವ ಬೆಳ್ಳೆ, ಪ್ರೌಢಶಾಲಾ ಮುಖ್ಯ ಶಿಕ್ಷಕಿ ಜಯಲಕ್ಷ್ಮಿ, ಉಪನ್ಯಾಸಕರಾದ ಡಾ ರೇಖಾ, ರಮಾನಂದ , ವಿದ್ಯಾರ್ಥಿ ನಾಯಕರಾದ ಗಣೇಶ್ ಎನ್ ಧನರಾಜ ಕೆ.ಎಸ್ ಮತ್ತಿತರರು ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು ಹಾಗೂ ವಿದ್ಯಾರ್ಥಿ ವೇತನ ವಿತರಿಸಲಾಯಿತು ಶಿಕ್ಷಕಿ ಪ್ರೇಮಾ ನಿರೂಪಿಸಿದರು, ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
Kshetra Samachara
24/12/2024 03:38 pm