ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರತಿಕೃತಿ ದಹಿಸಿ ಆಕ್ರೋಶ

ಧಾರವಾಡ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಧಾರವಾಡ ಗ್ರಾಮೀಣ ಕಾಂಗ್ರೆಸ್ ಎಸ್‌ಸಿ ಘಟಕದ ವತಿಯಿಂದ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನಾಕಾರರು, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಪ್ರತಿಕೃತಿಯನ್ನು ದಹಿಸಿ ಅವರ ವಿರುದ್ಧ ಧಿಕ್ಕಾರ ಕೂಗಿದರು. ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರು ಭಾರತದ ಸಂವಿಧಾನ ಶಿಲ್ಪಿ. ಬಲಿಷ್ಠ ಭಾರತವನ್ನು ನಿರ್ಮಿಸುವಲ್ಲಿ ಅವರ ಕೊಡುಗೆ ಏನೆಂದು ಇಡೀ ಜಗತ್ತಿಗೆ ಗೊತ್ತಿದೆ. ಹೀಗಿರುವಾಗ ಅಮಿತ್ ಶಾ ಅವರು ಅಂಬೇಡ್ಕರ್ ಅವರಿಗೆ ಸಂಸತ್ ಅಧಿವೇಶನದಲ್ಲಿ ಅವಮಾನ ಮಾಡಿದ್ದಾರೆ. ಕೂಡಲೇ ಅವರನ್ನು ಸಚಿವ ಸಂಪುಟದಿಂದ ಕೈ ಬಿಡಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

Edited By : Shivu K
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

24/12/2024 04:24 pm

Cinque Terre

60.07 K

Cinque Terre

2

ಸಂಬಂಧಿತ ಸುದ್ದಿ