ಮುಮಭಯ: ಮಹಾರಾಷ್ಟ್ರದ ಕಲ್ಯಾಣ್‌ನಲ್ಲಿ ವ್ಯಕ್ತಿಯೊಬ್ಬ ತನ್ನ ಬಾಸ್ ಜೊತೆ ಮಲಗಲು ನಿರಾಕರಿಸಿದ 28 ವರ್ಷದ ಎರಡನೇ ಪತ್ನಿಗೆ ತ್ರಿವಳಿ ತಲಾಖ್ ನೀಡಿ ಸಂಕಷ್ಟಕ್ಕೆ ಸಿಲುಕಿದ್ದಾನೆ. 45 ವರ್ಷ ವಯಸ್ಸಿನ ಆರೋಪಿ ಟೆಕ್ಕಿಯಾಗಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಡಿಸೆಂಬರ್ 19ರಂದು ಈ ಘಟನೆ ನಡೆದಿದೆ. ಆರೋಪಿಯು ಮೊದಲ ಪತ್ನಿಯಿಂದ ಬೇರೆಯಾಗಿದ್ದು, ಆಕೆಗೆ 15 ಲಕ್ಷ ರೂಪಾಯಿ ನೀಡಲು ಎರಡನೇ ಪತ್ನಿಯಿಂದ ಹಣಕ್ಕೆ ಬೇಡಿಕೆ ಇಟ್ಟಿದ್ದ. ಆಕೆ ನಿರಾಕರಿಸಿದಾಗ ಪಾರ್ಟಿಯೊಂದರಲ್ಲಿ ತನ್ನ ಬಾಸ್ ಜೊತೆ ಹಾಸಿಗೆ ಹಂಚಿಕೊಳ್ಳುವಂತೆ ಪತ್ನಿಗೆ ಕೇಳಿದ್ದ. ಇದನ್ನು ನಿರಾಕರಿಸಿದಾಗ ಸ್ಥಳದಲ್ಲೇ ತ್ರಿವಳಿ ತಲಾಖ್ ಹೇಳಿದ್ದಾನೆ. ಅಲ್ಲದೆ, ಮಹಿಳೆಯ ಮೇಲೆ ದೈಹಿಕ ಹಲ್ಲೆ ನಡೆಸಿ ಮನೆಯಿಂದ ಹೊರ ಹಾಕಿದ್ದಾನೆ.
ತ್ರಿವಳಿ ತಲಾಖ್ ಘೋಷಣೆಯಾದ ನಂತರ ಮಹಿಳೆ ಸಂಭಾಜಿ ನಗರ ಠಾಣೆಗೆ ತೆರಳಿ ದೂರು ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
PublicNext
24/12/2024 04:46 pm