ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿಯಲ್ಲಿ ಜಿ.ಪರಮೇಶ್ವರ್ ನೇತೃತ್ವದಲ್ಲಿ ಮೂರು ನೂತನ ಪೊಲೀಸ್ ಠಾಣೆ ಉದ್ಘಾಟನೆ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ನೂತನವಾಗಿದ್ದ ಮೂರು ಪೊಲೀಸ್ ಠಾಣೆಗಳನ್ನು, ಹೋಮ್ ಮಿನಿಸ್ಟರ್ ಜಿ. ಪರಮೇಶ್ವರ್ ನೇತೃತ್ವದಲ್ಲಿ ಉದ್ಘಾಟನೆ ಮಾಡಲಾಗಿದ್ದು, ಸಭಾಪತಿ ಬಸವರಾಜ ಹೊರಟ್ಟಿ, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್, ಶಾಸಕ ಮಹೇಶ್ ಟೆಂಗಿನಕಾಯಿ, ಪ್ರಸಾದ್ ಅಬ್ಬಯ್ಯ, ಎನ್. ಹೆಚ್. ಕೋನರೆಡ್ಡಿ ಸೇರಿದಂತೆ ಹಲವಾರು ಗಣ್ಯರು ಸಾಥ್ ನೀಡಿದ್ದಾರೆ.

ಎಸ್,,,, ಹುಬ್ಬಳ್ಳಿಯ ಗೋಕುಲ ರೋಡ್ ಪೊಲೀಸ್ ಠಾಣೆ, ಗ್ರಾಮೀಣ ಪೊಲೀಸ್ ಠಾಣೆ, ವಿದ್ಯಾನಗರ ಪೊಲೀಸ್ ಠಾಣೆ ಈ ಮೂರು ಠಾಣೆಯನ್ನು ಇಂದು ಗೃಹ ಸಚಿವರ ನೇತೃತ್ವದಲ್ಲಿ ಉದ್ಘಾಟನೆ ಮಾಡಿದರು.‌ ಎಲ್ಲ ಠಾಣೆಗಳು ಜನಸ್ನೇಹಿ ಪೊಲೀಸ್ ಠಾಣೆಯಾಗಲೆಂದು ಶುಭಹಾರೈಸಿದರು. ಎಲ್ಲ ಪೊಲೀಸ್ ಅಧಿಕಾರಿಗಳು ಶ್ರದ್ಧೆ ನಿಷ್ಠೆಯಿಂದ ಕೆಲಸ ಮಾಡಿ ಎಂದು ಕಿವಿ ಮಾತು ಹೇಳಿದರು. ಈ ಉದ್ಘಾಟನಾ ಕಾರ್ಯಕ್ರಮದಲ್ಲಿ ಜಿಲಾಧಿಕಾರಿ ದಿವ್ಯ ಪ್ರಭು, ಪೊಲೀಸ್ ಕಮೀಷನರ್ ಎನ್ ಶಶಿಕುಮಾರ್, ಡಿಸಿಪಿಗಳಾದ ರವೀಶ್, ನಂದಗಾಂವಿ ಸೇರಿದಂತೆ ಎಲ್ಲ ಪೊಲೀಸ್ ಇನ್ಸ್ಪೆಕ್ಟರ್‌ಗಳು ಪೊಲೀಸ್ ಸಿಬ್ಬಂದಿ ಭಾಗಿಯಾಗಿದ್ದರು.

Edited By : Ashok M
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

24/12/2024 06:27 pm

Cinque Terre

45.94 K

Cinque Terre

0

ಸಂಬಂಧಿತ ಸುದ್ದಿ