ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮಡಿಕೇರಿ: ಅಮಿತ್ ಷಾ ವಿರುದ್ಧ ಮಡಿಕೇರಿಯಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ

ಮಡಿಕೇರಿ: ಭಾರತ ಭಾಗ್ಯವಿಧಾತ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೆಸರನ್ನು ಸಂಸತ್‌ನಲ್ಲಿ ಪ್ರಸ್ತಾಪಿಸಿ ಅಪಹಾಸ್ಯ ಮಾಡಿರುವ ಕೇಂದ್ರ‍್ರ ಗೃಹ ಸಚಿವ ಅಮಿತ್ ಷಾ ತಮ್ಮ ಗೃಹ ಸಚಿವ ಸ್ಥಾನದಿಂದ ಕೆಳಕ್ಕಿಳಿಯಬೇಕು ಮತ್ತು ಅವರನ್ನು ದೇಶದಿಂದಲೆ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ನಗರದ ಜನರಲ್ ಕೆ.ಎಸ್.ತಿಮ್ಮಯ್ಯ ವೃತ್ತದಲ್ಲಿ ವಿವಿಧ ಪ್ರಗತಿಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು 'ಅಂಬೇಡ್ಕರ್ ಹೆಸರು ನಮಗೆ ಶೋಕಿಯಲ್ಲ, ಸ್ಮರಣೆ, ಅಸ್ಮಿತೆ, ಬದುಕು' ಎನ್ನುವ ಘೋಷವಾಕ್ಯದಡಿ ದಲಿತ ಸಂಘಟನೆಗಳ ಒಕ್ಕೂಟ, ಸಮಾನ ಮನಸ್ಕರ ವೇದಿಕೆ ಮತ್ತು ಪ್ರಗತಿಪರ ಚಿಂತಕರ ಒಕ್ಕೂಟದಿಂದ ಮಂಗಳವಾರ ಬೆಳಗ್ಗೆ ಜ.ತಿಮ್ಮಯ್ಯ ವೃತ್ತದಲ್ಲಿ ಪ್ರತಿಭಟನೆ ನಡೆದು, 'ಮಾನವ ಸರಪಳಿ' ರಚಿಸುವ ಮೂಲಕ ಕೆಲ ಕಾಲ ರಸ್ತೆ ತಡೆ ನಡೆಸಲಾಯಿತು.

Edited By : PublicNext Desk
Kshetra Samachara

Kshetra Samachara

24/12/2024 06:34 pm

Cinque Terre

320

Cinque Terre

0

ಸಂಬಂಧಿತ ಸುದ್ದಿ