ಬೆಂಗಳೂರು : ಬೆಳಗಾವಿಯ ಸುವರ್ಣಸೌಧದಲ್ಲಿ ಸಿಟಿ ರವಿ ಮೇಲೆ ಸಚವೆ ಲಕ್ಷ್ಮಿ ಹೆಬ್ಬಾಳ್ಕರ್ ಬೆಂಬಲಿಗರಿಂದ ಹಲ್ಲೆ ಪ್ರಕರಣ ಮತ್ತು ಸಿಟಿ ರವಿ ಬಂಧನ ಸಮಯದಲ್ಲಿ ಪೊಲೀಸರು ನಡೆದುಕೊಂಡ ವರ್ತನೆಯ ಬಗ್ಗೆ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.
ಇಂದು ಸಂಜೆ ವಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದ ಬಿಜೆಪಿ ನಿಯೋಗ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚೆಂದ್ ಗೆಹ್ಲೋಟ್ ರನ್ನ ಭೇಟಿಯಾಗಿ ಸಿಟಿ ರವಿ ಪ್ರಕರಣದಲ್ಲಿ ಕೂಡಲೇ ಮಧ್ಯಪ್ರವೇಶ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.
ಸಿಟಿ ರವಿ ಬಂಧನ ವೇಳೆ ಸರ್ಕಾರದ ನಡೆದುಕೊಂಡ ರೀತಿ ಸರಿಯಾಗಿಲ್ಲ, ಪೊಲೀಸ್ ಇಲಾಖೆ ಮೂಲಕ ಅಧಿಕಾರ ದುರ್ಬಳಕೆ ಆಗಿದೆ ಎಂದು ಬೆಳಗಾವಿಯ ಅಧಿವೇಶನದಲ್ಲಿ ನಡೆದ ಘಟನೆಯನ್ನ ಸಂಪೂರ್ಣವಾಗಿ ರಾಜ್ಯಪಾಲರಿಗೆ ಬಿಜೆಪಿ ನಿಯೋಗ ತಿಳಿಸಿದೆ.
ಆರ್ ಅಶೋಕ್ ನೇತೃತ್ವದ ಬಿಜೆಪಿ ನಿಯೋಗದಲ್ಲಿ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ, ಶಾಸಕ ಜನಾರ್ದನ ರೆಡ್ಡಿ ಮತ್ತು ಪರಿಷತ್ ಸದಸ್ಯ ರವಿ ಕುಮಾರ್ ಉಪಸ್ಥಿತಿರಿದ್ದರು.
PublicNext
24/12/2024 06:40 pm