ಬೆಂಗಳೂರು : ಕರುನಾಡ ಚಕ್ರವರ್ತಿ ಹ್ಯಾಟ್ರಿಕ್ ಹಿರೋ ಶಿವಕುಮಾರ್ ಗೆ ಇಂದು ಅಮೇರಿಕಾದಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ. ಶಿವಕುಮಾರ್ ಅಭಿಮಾನಿಗಳು ಸೇರಿದಂತೆ ನಾಡಿನ ಜನತೆ ಶಿವರಾಜ್ ಕುಮಾರ್ ಗುಣಮುಖರಾಗಲೆಂದು ಹಾರೈಸುತ್ತಿದ್ದಾರೆ. ಇದೀಗ ಖುದ್ದು ಸಿಎಂ ಸಿದ್ದರಾಮಯ್ಯ ಅಮೇರಿಕಾದಲ್ಲಿರುವ ಶಿವರಾಜ್ ಕುಮಾರ್ ಗೆ ಕರೆ ಮಾಡಿ ಶೀಘ್ರ ಗುಣಮುಖರಾಗುವಂತೆ ಹಾರಿಸಿದ್ದಾರೆ.
ಈ ಕುರಿತಂತೆ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಸಿಎಂ ಸಿದ್ದರಾಮಯ್ಯ, ಅನಾರೋಗ್ಯದ ನಿಮಿತ್ತ ಇಂದು ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿರುವ ಕನ್ನಡ ಚಿತ್ರರಂಗದ ಖ್ಯಾತ ನಟ ಶಿವರಾಜ್ ಕುಮಾರ್ ಅವರಿಗೆ ಕರೆಮಾಡಿ ಮಾತನಾಡಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದೇನೆ.
ನನಗೆ ತಿಳಿದಂತೆ ಶಿವರಾಜ್ ಕುಮಾರ್ ಅವರ ಆತ್ಮವಿಶ್ವಾಸ, ಧೈರ್ಯ ಮತ್ತು ಸಹೃದಯತೆ ಅವರನ್ನು ಈ ಹೋರಾಟದಲ್ಲಿ ಗೆಲ್ಲಿಸಿಕೊಂಡು ಬರಲಿದೆ ಎಂಬ ವಿಶ್ವಾಸವಿದೆ. ಬದುಕಿನ ದಾರಿಯಲ್ಲಿ ಎದುರಾಗಿರುವ ಈ ಸಣ್ಣ ಸಂಕಷ್ಟವನ್ನು ನಿವಾರಿಸಿಕೊಂಡು ಆರೋಗ್ಯವಂತರಾಗಿ ಬರಲಿರುವ ಶಿವರಾಜಕುಮಾರ್ ಅವರ ಆಗಮನವನ್ನು ಎದುರು ನೋಡುತ್ತಿರುವ ಅವರ ಹಿತೈಷಿಗಳಲ್ಲಿ ನಾನೂ ಒಬ್ಬ. ನಾಡಿನ ಹಿರಿಯರ ಆಶೀರ್ವಾದ ಮತ್ತು ಕಿರಿಯರ ಶುಭಹಾರೈಕೆ ಶಿವರಾಜಕುಮಾರ್ ಅವರ ಜೊತೆಗಿದ್ದು ಅವರನ್ನು ಕಾಪಾಡಲಿದೆ ಎಂದು ಹಾರೈಸಿದ್ದಾರೆ.
PublicNext
24/12/2024 06:42 pm