ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೀದರ್ : ಸರ್ಕಾರದ ಹಣ ದುರ್ಬಳಕೆ ಆರೋಪ - ಪಿಡಿಓ ವಿರುದ್ಧ ಕ್ರಿಮಿನಲ್ ಕೇಸ್

ಚಿಟಗುಪ್ಪ: ಸರ್ಕಾರದ ಹಣ ದುರ್ಬಳಕೆ ಆರೋಪದಡಿಯಲ್ಲಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅಶ್ವಿನಿ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಾಗಿದೆ.

ತಾಲೂಕಿನ ನಿರ್ಣಾ ಗ್ರಾಮ ಪಂಚಾಯಿತಿನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಪಿಡಿಒ ಅಶ್ವಿನಿ ಮೇಲೆ ಗ್ರಾಮ ಪಂಚಾಯಿತಿನ ಲಕ್ಷಾಂತರ ರುಪಾಯಿ ಹಣ ದುರುಪಯೋಗ ಕುರಿತು ಕ್ರಿಮಿನಲ್ ಪ್ರಕರಣ ದಾಖಲಾಗಿದೆ.

2023-24ನೇ ಸಾಲಿನ ನಿರ್ಣಾ ಗ್ರಾಪಂನಲ್ಲಿ 15ನೇ ಹಣಕಾಸು ಯೋಜನೆಯಡಿ ಕ್ರಿಯಾ ಯೋಜನೆಯನ್ನು ತಯಾರಿಸದೇ ಹಾಗೂ ಗ್ರಾಮ ಸಭೆಯಲ್ಲಿ ಅನುಮೋದನೆ ಪಡೆಯದೇ ಸರ್ಕಾರದ ಮಾರ್ಗ ಸೂಚಿಗಳನ್ನು ಗಾಳಿಗೆ ತೂರಿ ಹಣ ಖರ್ಚು ಮಾಡಿದ್ದ ಆರೋಪ ಮತ್ತು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಸೂಲಿ ಆದ ತೆರಿಗೆ ಮೊತ್ತವನ್ನು ಗ್ರಾಮ ಪಂಚಾಯಿತಿನ ಸಿಬ್ಬಂದಿ ಹೆಸರಿನಲ್ಲಿ ಚೆಕ್ ನೀಡಿ ನಿಯಮಬಾಹಿರವಾಗಿ ಖರ್ಚು ಮಾಡಿ ಹಣ ದುರ್ಬಳಕೆ ಮಾಡಿಕೊಂಡಿರುವ ಆರೋಪದಡಿ ದೂರು ದಾಖಲಾಗಿದೆ.

ಈ ಬಗ್ಗೆ ಜಂಟಿ ವರದಿಯ ಹಿನ್ನೆಲೆಯಲ್ಲಿ ಚಿಟಗುಪ್ಪ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಲಕ್ಷ್ಮಿ ಮದರಗಾಂವ ಪೊಲೀಸ್ ಠಾಣೆಯಲ್ಲಿ ಪಿಡಿಓ ಅಶ್ವಿನಿ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ್ದಾರೆ.

Edited By : Abhishek Kamoji
PublicNext

PublicNext

24/12/2024 07:34 pm

Cinque Terre

20.81 K

Cinque Terre

0

ಸಂಬಂಧಿತ ಸುದ್ದಿ