ಬೀದರ್: ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಾ.ಅಂಬೇಡ್ಕರ್ ಅವರ ಬಗ್ಗೆ ಅವಮಾನಕರ ಮಾತುಗಳನ್ನಾಡಿರುವುದನ್ನು ಖಂಡಿಸಿ ಇಂದು ಹುಮನಾಬಾದ್ ಪಟ್ಟಣ ಸಂಪೂರ್ಣವಾಗಿ ಬಂದ್ ಮಾಡಲಾಯಿತು.
ಹುಮನಾಬಾದ್ ನಗರದಲ್ಲಿ ಬೆಳಿಗ್ಗೆಯಿಂದ ಅಂಗಡಿ ಮುಂಗಟ್ಟುಗಳು ಸಂಪೂರ್ಣವಾಗಿ ಮುಚ್ಚಲ್ಪಟ್ಟಿದ್ದವು. ಸಾವಿರಾರು ಸಂಖ್ಯೆಯಲ್ಲಿ ಸೇರಿದ ಜನರು ಅಮಿತ್ ಶಾ ವಿರುದ್ಧ ಘೋಷಣೆ ಕೂಗುವ ಮೂಲಕ ಆಕ್ರೋಶ ಹೊರ ಹಾಕಿದರು.
ಚಳಿಗಾಲದ ಸಂಸತ್ ಅಧಿವೇಶನದಲ್ಲಿ ಸಂವಿಧಾನದ 75ನೇ ವರ್ಷಾಚರಣೆಯ ಪ್ರಯುಕ್ತ ನಡೆದ ಚರ್ಚೆಯ ಸಂದರ್ಭದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಅಡಿಯಲ್ಲಿ ಚುನಾವಣೆಯಲ್ಲಿ ಗೆದ್ದು, ಕೇಂದ್ರದ ಗೃಹ ಸಚಿವರಾಗಿ ಸಂಸತ್ತಿನಲ್ಲಿ ನಿಂತು, ಅಂಬೇಡ್ಕರ್ ಎಂಬ ಹೆಸರು ಫ್ಯಾಶನ್ ಆಗಿದೆ ಎಂದು ಅವಮಾನಕರ ಹೇಳಿಕೆ ನೀಡಿರುವುದು ಡಾ.ಅಂಬೇಡ್ಕರ್ ಮತ್ತು ಅವರು ಬರೆದ ಸಂವಿಧಾನಕ್ಕೆ ಮಾಡಿರುವ ಅವಮಾನವಾಗಿದೆ. ಇದನ್ನು ನಾವು ಖಂಡಿಸುತ್ತೇವೆ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.
ಯೋಹಾನ್ ಪಿ ಹೊನ್ನಡ್ಡಿ, ಪಬ್ಲಿಕ್ ನೆಕ್ಸ್ಟ್, ಬೀದರ್
PublicNext
24/12/2024 07:38 pm