ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ರೈತರಿಗೆ ಗುಡ್ ನ್ಯೂಸ್ : ಬೆಂಬಲ ಬೆಲೆಯಲ್ಲಿ ತೊಗರಿ, ಕಡಲೆ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ

ಬೆಂಗಳೂರು: ಬೆಂಬಲ ಬೆಲೆಯಲ್ಲಿ ತೊಗರಿ ಕಡಲೆ ಖರೀದಿಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಮನವಿ ಮೇರೆಗೆ ತೊಗರಿ ಮತ್ತು ಕಡಲೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿ ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಈ ಕುರಿತು ಮಾಧ್ಯಮ ಪ್ರಕಟಣೆ ಮೂಲಕ ತಿಳಿಸಿರುವ ಸಚಿವರು, ಪ್ರತಿ ಕ್ವಿಂಟಲ್‌ಗೆ ತೊಗರಿಗೆ 7,550 ರೂ ಹಾಗೂ ಕಡಲೆಗೆ 5,650 ರೂ ನಿಗದಿಪಡಿಸಲಾಗಿದೆ. ರಾಜ್ಯದಲ್ಲಿ ತೊಗರಿ ಬೆಳೆಯನ್ನು 15.02 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಲಾಗುತ್ತಿದ್ದು, ಅಂದಾಜು 11.96 ಲಕ್ಷ ಮೆಟ್ರಿಕ್‌ಟನ್‌ ಉತ್ಪಾದನೆಯನ್ನು ನಿರೀಕ್ಷಿಸಲಾಗಿದೆ. ಕಲಬುರಗಿ, ಯಾದಗಿರಿ, ಬೀದರ್‌, ರಾಯಚೂರು, ವಿಜಯಪುರ, ಕೊಪ್ಪಳ ಬೆಳಗಾವಿ, ಬಳ್ಳಾರಿ, ವಿಜಯನಗರ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಖರೀದಿ ಕೇಂದ್ರ ಆರಂಭಿಸಲಾಗುವುದು. ರಾಜ್ಯ ಸರ್ಕಾರದ ಕೋರಿಕೆಯ ಮೇರೆಗೆ ಕೇಂದ್ರ ಸರ್ಕಾರವು 3,06,150 ಮೆಟ್ರಿಕ್‌ ಟನ್‌ ಖರೀದಿಗೆ ಅನುಮತಿ ನೀಡಿದೆ.

ಪ್ರಸ್ತುತ ಕಡಲೆಯನ್ನು 10.03 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಯಲಾಗುತ್ತಿದ್ದು, ಅಂದಾಜು 6.63 ಲಕ್ಷ ಮೆಟ್ರಿಕ್‌ಟನ್‌ ಉತ್ಪಾದನೆಯನ್ನು ನಿರೀಕ್ಷಿಸಲಾಗಿದೆ. ಧಾರವಾಡ, ಕೊಪ್ಪಳ, ಬಳ್ಳಾರಿ, ಚಿತ್ರದುರ್ಗ, ಗದಗ, ಬೆಳಗಾವಿ, ವಿಜಯಪುರ ಕಲಬುರಗಿ, ಯಾದಗಿರಿ, ಬೀದರ್‌, ಬಾಗಲಕೋಟೆ, ದಾವಣಗೆರೆ, ಚಿಕ್ಕಮಗಳೂರು ಮತ್ತು ರಾಯಚೂರು ಜಿಲ್ಲೆಗಳಲ್ಲಿ ಖರೀದಿ ಕೇಂದ್ರ ಆರಂಭಿಸಲಾಗುವುದು. ಬೆಂಬಲ ಬೆಲೆಯಲ್ಲಿ 96,498 ಮೆಟ್ರಿಕ್‌ ಟನ್‌ ಕಡಲೆ ಖರೀದಿ ಮಾಡಲಾಗುವುದು. ಕೇಂದ್ರ ಸರ್ಕಾರ ಬೆಂಬಲ ಬೆಲೆಯಲ್ಲಿ ಖರೀದಿಗೆ ಅನುಮತಿ ನೀಡುತ್ತಿದ್ದಂತೆ ನೋಂದಣಿ ಮತ್ತು ಖರೀದಿ ಕೇಂದ್ರ ಆರಂಭಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ.

Edited By : Vijay Kumar
PublicNext

PublicNext

24/12/2024 10:29 pm

Cinque Terre

22.35 K

Cinque Terre

0

ಸಂಬಂಧಿತ ಸುದ್ದಿ