ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಐದು ರಾಜ್ಯಗಳಿಗೆ ಹೊಸ ಗವರ್ನರ್‌ಗಳನ್ನು ನೇಮಕ ಮಾಡಿದ್ದಾರೆ. ಮಾಜಿ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರನ್ನು ಮಣಿಪುರ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ.
ಮಾಜಿ ಸೇನಾ ಮುಖ್ಯಸ್ಥ ವಿಕೆ ಸಿಂಗ್ ಅವರನ್ನು ಮಿಜೋರಾಂ ರಾಜ್ಯಪಾಲರನ್ನಾಗಿ ನೇಮಿಸಲಾಗಿದೆ. ಕೇರಳದ ಮಾಜಿ ಗವರ್ನರ್ ಆರಿಫ್ ಮೊಹಮ್ಮದ್ ಖಾನ್ ಬಿಹಾರ ರಾಜ್ಯಪಾಲ, ಹರಿಬಾಬು ಕಂಬಂಪತಿ ಒಡಿಶಾ ರಾಜ್ಯಪಾಲ ಮತ್ತು ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಕೇರಳ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ.
PublicNext
24/12/2024 10:49 pm