ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಶಾಲನಗರ : ಕೂಡುಮಂಗಳೂರು ಗ್ರಾ.ಪಂ ಸಾಮಾನ್ಯ ಸಭೆ - ಅಭಿವೃದ್ಧಿ ವಿಷಯಗಳ ಬಗ್ಗೆ ಚರ್ಚೆ

ಕುಶಾಲನಗರ : ಕೂಡುಮಂಗಳೂರು ಗ್ರಾ.ಪಂ ಸಾಮಾನ್ಯ ಸಭೆಯು ಅಧ್ಯಕ್ಷರಾದ ಬಾಸ್ಕರ್ ನಾಯಕ್ ಅವರ ಅಧ್ಯಕ್ಷತೆಯಲ್ಲಿ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

ಸಭೆಯ ಪ್ರಾರಂಭದಲ್ಲಿ ಜಮಾ ಖರ್ಚಿನ ಬಗ್ಗೆ ಚರ್ಚೆ ನಡೆಯಿತು. ನಂತರ ವಸತಿ ಯೋಜನೆಯ ಫಲಾನುಭವಿಗಳ ಆಯ್ಕೆಗಳ ಚರ್ಚಿಸಲಾಯಿತು. ನಂತರ 15ನೇ ಹಣಕಾಸಿನ ಕ್ರಿಯಾಯೋಜನೆಯನ್ನು ಅನುಮೋದಿಸಲಾಯಿತು. ಪಂಚಾಯಿತಿ ನಿಧಿಯ ಕ್ರಿಯಾಯೋಜನೆಯ ಕಾಮಗಾರಿಯ ಬಗ್ಗೆ ಪಿಡಿಓ ಸದಸ್ಯರ ಗಮನಕ್ಕೆ ತಂದರು.

ಸುಂದರನಗರ ಗ್ರಾಮದಲ್ಲಿ ಪಂಚಾಯಿತಿಯಿಂದ ಅನುಮತಿ ಪಡೆಯದೇ ಬಹು ಅಂತಸ್ತಿನ ಕಟ್ಟಡ ನಿರ್ಮಾಣವಾಗುತ್ತಿದೆ. ಈ ಹಿಂದೆ ಕಾಮಗಾರಿ ನಡೆಸದಂತೆ ಸೂಚಿಸಲಾಗಿದ್ದರೂ, ಕೆಲಸ ಮಾಡಲಾಗುತ್ತಿದೆ. ಆದ್ದರಿಂದ ಆದಷ್ಟು ಬೇಗನೇ ಕಾಮಗಾರಿಗೆ ಬಳಸುತ್ತಿರುವ ವಸ್ತುಗಳನ್ನು ವಶಕ್ಕೆ ಪಡೆಯುವಂತೆ ಸದಸ್ಯರಾದ ಕೆ.ಬಿ.ಶಂಶುದ್ಧೀನ್ ತಿಳಿಸಿದರು. ಇದಕ್ಕೆ ಸದಸ್ಯರಾದ ಆಶಾ ಧ್ವನಿಗೂಡಿಸಿದರು. ಚರಂಡಿ ಸ್ವಚ್ಚತೆ, ಕಸ ವಿಲೇವಾರಿಯನ್ನು ಸಮರ್ಪಕವಾಗಿ ನಡೆಸುವಂತೆ ಸದಸ್ಯರು ಆಗ್ರಹಿಸಿದರು.

ಬಳಿಕ ಸಾರ್ವಜನಿಕರ ಅರ್ಜಿ ವಿಲೇವಾರಿ ನಡೆಯಿತು. ಅಧ್ಯಕ್ಷರ ಅನುಮತಿ ಮೇರೆಗೆ ಇತರೆ ವಿಷಯಗಳ ಬಗ್ಗೆ ಚರ್ಚೆ ನಡೆಯಿತು. ಈ ಸಂದರ್ಭ ಕೂಡುಮಂಗಳೂರು ಗ್ರಾ.ಪಂ ಉಪಾಧ್ಯಕ್ಷೆ ಶಶಿಕಲಾ, ಗ್ರಾ.ಪಂ ಸದಸ್ಯರು ಹಾಗೂ ಸಿಬ್ಬಂದಿಗಳು ಇದ್ದರು.

Edited By : PublicNext Desk
Kshetra Samachara

Kshetra Samachara

25/12/2024 08:08 am

Cinque Terre

200

Cinque Terre

0

ಸಂಬಂಧಿತ ಸುದ್ದಿ