ಮಡಿಕೇರಿ : ಮಡಿಕೇರಿ ತಾಲ್ಲೂಕು ಒಕ್ಕಲಿಗರ ಸಂಘದ ವಾರ್ಷಿಕ ಮಹಾಸಭೆ ನರಗದ ಹೋಟೇಲ್ ರಾಜ್ ಸಭಾಂಗಣದಲ್ಲಿ ನಡೆಯಿತು.
ಸಭೆಯನ್ನು ಉದ್ಘಾಟಿಸಿ ಮಾತನಾಡಿದ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ ಅವರು ರಾಜ್ಯ ಒಕ್ಕಲಿಗರ ಸಂಘದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯಕೀಯ ಸಂಸ್ಥೆ, ವಿದ್ಯಾ ಸಂಸ್ಥೆ ಸೇರಿದಂತೆ ವಿವಿಧ ಸಂಘ, ಸಂಸ್ಥೆಗಳು ಸಂಘದ ಎಲ್ಲಾ ರೀತಿಯ ಸೌಲಭ್ಯಗಳನ್ನು ಪಡೆದುಕೊಳ್ಳುವಂತೆ ಸಲಹೆ ನೀಡಿದರು.
ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷ ವಿ.ಜಿ.ಮೋಹನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಕಳೆದ ಸಾಲಿನ ಕಾರ್ಯಚಟುವಟಿಕೆಗಳ ವರದಿಯನ್ನು ಕಾರ್ಯದರ್ಶಿ ಕುಶಾಲಪ್ಪ ವಾಚಿಸಿದರು. ಖಜಾಂಚಿ ಕೆ.ರಮೇಶ್ ವಾರ್ಷಿಕ ಲೆಕ್ಕಪತ್ರವನ್ನು ಮಂಡಿಸಿದರು.
ಕೊಡಗು ಜಿಲ್ಲಾ ಒಕ್ಕಲಿಗ ಸಂಘದ ಗೌರವ ಸಲಹೆಗಾರ ವಿ.ಪಿ.ಸುರೇಶ್, ಸಂಘದ ನಿರ್ದೇಶಕರು, ಗೌರವ ಸಲಹೆಗಾರರು ಸದಸ್ಯರು ಹಾಗೂ ಕುಟುಂಬ ವರ್ಗದವರು ಉಪಸ್ಥಿತರಿದ್ದರು. ಧನ್ಯಶ್ರೀ ಪ್ರಾರ್ಥಿಸಿ, ಎಂ.ಧನAಜಯ ಸ್ವಾಗತಿಸಿ ನಿರೂಪಿಸಿದರು, ಶೀಲಾ ಪ್ರಕಾಶ್ ವಂದಿಸಿದರು.
ಸಭೆಯಲ್ಲಿ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕ ಹರಪಳ್ಳಿ ರವೀಂದ್ರ, ರೈತ ಹೋರಾಟ ಸಮಿತಿ ಮತ್ತು ಸೋಮವಾರಪೇಟೆ ಯುವ ವೇದಿಕೆ ಅಧ್ಯಕ್ಷ ಸುರೇಶ್ ಚಕ್ರವರ್ತಿ ಹಾಗೂ ಕೊಡಗು ಜಿಲ್ಲಾ ಯುವ ವೇದಿಕೆ ಅಧ್ಯಕ್ಷ ಗಿರೀಶ್ ಮಲ್ಲಪ್ಪ ಅವರನ್ನು ಸನ್ಮಾನಿಸಿ, ಗೌರವಿಸಲಾಯಿತು.
Kshetra Samachara
25/12/2024 08:10 am