ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಮೆರಿಕ: ಡಾ. ಶಿವರಾಜ್‌ಕುಮಾರ್ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡ ಕುಟುಂಬಸ್ಥರು

ಅಮೆರಿಕ: ನಟ ಡಾ. ಶಿವರಾಜ್‌ಕುಮಾರ್ ಅವರ ಇತ್ತೀಚಿನ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅವರು ಈಗ ಸ್ಥಿರ ಪರಿಸ್ಥಿತಿಯಲ್ಲಿ ಇದ್ದು ಚೇತರಿಸಿಕೊಳ್ಳುತ್ತಿದ್ದಾರೆ ಎಂಬ ಸುಸಂವಾದವನ್ನು ಹಂಚಿಕೊಳ್ಳಲು ಸಂತೋಷವಾಗುತ್ತಿದೆ ಎಂದು ಪತ್ನಿ ಗೀತಾ ಶಿವರಾಜ್ ಕುಮಾರ್ ಹಾಗೂ ಸಚಿವ ಮಧಬಂಗಾರಪ್ಪ ತಿಳಿಸಿದ್ದಾರೆ.

ಈ ಶಸ್ತ್ರಚಿಕಿತ್ಸೆಯನ್ನು ಡಾ. ಮುರುಗೇಶ ಮನೋಹರನ್ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನೆರವೇರಿಸಲಾಗಿದ್ದು, ಶಸ್ತ್ರಚಿಕಿತ್ಸೆಯ ವೇಳೆ ಮತ್ತು ಶಸ್ತ್ರಚಿಕಿತ್ಸೆ ನಂತರದ ಆರೈಕೆ ಸಮಯದಲ್ಲಿ ಡಾ. ಶಿವರಾಜ್‌ಕುಮಾರ್ ಅವರ ಆರೋಗ್ಯ ಸ್ಥಿತಿಯು ಸ್ಥಿರವಾಗಿತ್ತು ಎಂದು ಅವರು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ. ಅವರ ಸುಗಮ ಚೇತರಿಕೆಯನ್ನು ಖಚಿತಪಡಿಸಲು ಅವರು ಪ್ರಸ್ತುತ ತೀವ್ರ ನಿರೀಕ್ಷಣೆಯಲ್ಲಿದ್ದಾರೆ ಮತ್ತು ಪರಿಣತ ವೈದ್ಯರು ಹಾಗೂ ಆರೋಗ್ಯ ಸಿಬ್ಬಂದಿ ತಂಡದಿಂದ ಅತ್ಯುತ್ತಮ ಆರೈಕೆ ಮತ್ತು ಗಮನ ನೀಡುತ್ತಿದ್ದಾರೆ ಎಂದರು.

ಡಾ. ಶಿವರಾಜ್‌ಕುಮಾರ್ ಅವರ ಅಭಿಮಾನಿಗಳು, ಸಹೋದ್ಯೋಗಿಗಳು, ಶುಭಚಿಂತಕರು ಮತ್ತು ಮಾಧ್ಯಮಗಳಿಗೆ ಈ ಸಂದರ್ಭದಲ್ಲಿ ತೋರಿಸಿದ ನಿರಂತರ ಬೆಂಬಲ, ಪ್ರಾರ್ಥನೆ ಮತ್ತು ಮೆಚ್ಚುಗೆ ಸಂದೇಶಗಳಿಗೆ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸುತ್ತೇವೆ. ನಿಮ್ಮ ಪ್ರೋತ್ಸಾಹವು ಡಾ. ಶಿವರಾಜ್‌ಕುಮಾರ್ ಮತ್ತು ಅವರ ಕುಟುಂಬಕ್ಕೆ ದೊಡ್ಡ ಶಕ್ತಿ ಒದಗಿಸಿದೆ. ಅವರ ಚೇತರಿಕೆ ಕುರಿತು ಮುಂದಿನ ಮಾಹಿತಿಯನ್ನು ಸಮಯಕ್ಕೆ ಸರಿಯಾಗಿ ಹಂಚಿಕೊಳ್ಳಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ .

ಇನ್ನೂ ಇತ್ತ ಗೀತಾ ಶಿವರಾಜ್ ಕುಮಾರ್ ಮತ್ತು ಅವರ ಸಹೋಹದರ ಮಧಬಂಗಾರಪ್ಪ ವೈದ್ಯರಿಗೆ ಧ್ಯನ್ಯವಾದ ತಿಳಿಸುತ್ತಾ ಶಿವರಾಜ್ ಕುಮಾರ್ ಅವರು ಆರೋಗ್ಯವಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Edited By : Manjunath H D
PublicNext

PublicNext

25/12/2024 10:35 am

Cinque Terre

73.95 K

Cinque Terre

3