ಮಡಿಕೇರಿ: ಕಳೆದ ವರ್ಷ ಬರೆ ಕುಸಿದು ಹಾನಿಯಾಗಿದ್ದ ಕೊಯನಾಡು ಪ್ರಾಥಮಿಕ ಶಾಲೆಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್ ಪೊನ್ನಣ್ಣ ಅವರು ಭೇಟಿ ನೀಡಿ ಸಾರ್ವಜನಿಕರ ಕುಂದುಕೊರತೆ ಆಲಿಸಿದರು.
ಸಭೆಯ ಆರಂಭದಲ್ಲಿ ಮಾತನಾಡಿ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್ ಪೊನ್ನಣ್ಣ ಅವರು ಕಳೆದ ವರ್ಷ ಹೆಚ್ಚಿನ ಮಳೆಯಿಂದಾಗಿ ಶಾಲಾ ಕಟ್ಟಡದ ಗೋಡೆಗೆ ಹೆಚ್ಚಿನ ಹಾನಿಯಾಗಿತ್ತು, ಮಕ್ಕಳ ಹಿತಿದೃಷ್ಟಿಯಿಂದ ಸಂಪಾಜೆ ಶಾಲೆಗೆ ಸ್ಥಳಾಂತರಿಸಲಾಗಿತ್ತು, ಆ ದಿಸೆಯಲ್ಲಿ ಮಕ್ಕಳ ವಿದ್ಯಾಭ್ಯಾಸದ ಜೊತೆಗೆ ಸುಭದ್ರತೆಯ ದೃಷ್ಟಿಯಿಂದ ಎಲ್ಲರೂ ಗಮನಿಸಬೇಕು. ಬೇಸಿಗೆ ಅವಧಿಯಲ್ಲಾದರೂ ತಾತ್ಕಾಲಿಕವಾಗಿ ಕೊಯನಾಡುವಿನಲ್ಲಿ ಪುನರಾರಂಭಿಸುಂತೆ ಸಲಹೆ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡರವರು ಮಾತನಾಡಿ ಮಕ್ಕಳು ಶಾಲೆಯಿಂದ ವಂಚಿತರಾಗಬಾರದು, ಕೊಯನಾಡು ಶಾಲೆಯಲ್ಲಿ ಸುರಕ್ಷಿತ ಇಲ್ಲದಿರುವುದರಿಂದ ಸಂಪಾಜೆ ಸರ್ಕಾರಿ ಶಾಲೆಗೆ ಸ್ಥಳಾಂತರಿಸಲಾಗಿತ್ತು ಸದ್ಯ ಮಕ್ಕಳಿಗೆ ಪ್ರಯಾಣಭತ್ಯೆ ಭರಿಸಲು ಸರ್ಕಾರಕ್ಕೆ ಪತ್ರ ಬರೆಯಲಾಗಿದೆ ಎಂದು ತಿಳಿಸಿದರು.
ಕೊಯನಾಡು ಶಾಲೆ ಸುರಕ್ಷತೆಯ ಬಗ್ಗೆ ಸಂಬಂಧಪಟ್ಟವರು ಜಿಲ್ಲಾಡಳಿತಕ್ಕೆ ವರದಿ ನೀಡಿದ್ದು, ಜಿಲ್ಲಾಡಳಿತದ ಮಾರ್ಗಸೂಚಿಯಂತೆ ಮುಂದಿನ ಕ್ರಮ ವಹಿಸಲಾಗುವುದು ಎಂದು ಹೇಳಿದರು. ಆ ನಿಟ್ಟಿನಲ್ಲಿ ಎಲ್ಲರೂ ಸಹಕರಿಸುವಂತೆ ಕೋರಿದರು.
Kshetra Samachara
25/12/2024 11:00 am