ಮಡಿಕೇರಿ: ಸಂಪಾಜೆ ಮತ್ತು ಚೆಂಬು ಗ್ರಾ.ಪಂ.ವ್ಯಾಪ್ತಿಯಲ್ಲಿ ಸುಮಾರು 110.66 ಲಕ್ಷ ರೂ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರಾದ ಎ.ಎಸ್. ಪೊನ್ನಣ್ಣ ಚಾಲನೆ ನೀಡಿದ್ದಾರೆ.
ಸಂಪಾಜೆ ಬಳಿಯ ದುಗ್ಗಳ ಭಾಗಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು. ದುಗ್ಗಳ ಕುಟುಂಬದವರು ಸೇರಿದಂತೆ ಸುಮಾರು 18 ಹೆಚ್ಚು ಕುಟುಂಬಗಳು ವಾಸ ಮಾಡುತ್ತಿದ್ದು, ವಿಕಲಚೇತನರು, ವೃದ್ದರು ಹಾಗೂ ಹಲವರಿಗೆ ಉಪಯುಕ್ತವಾಗುತ್ತದೆ ಎಂದು ಎ.ಎಸ್.ಪೊನ್ನಣ್ಣ ಅವರು ಮಾಹಿತಿ ನೀಡಿದರು.
ಬಳಿಕ ಚೆಂಬು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೂಡಡ್ಕ ಹೈಟೆಕ್ ಶೌಚಾಲಯ ಕಟ್ಟಡ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿದರು.
ಚೆಂಬು ಊರುಬೈಲು ಬಳಿ ಮಳೆಯಿಂದ ಹಾನಿಯಾದ ಸೇತುವೆಯ ಮರು ನಿರ್ಮಾಣ, ಪನೆಡ್ಕ ದೇವಸ್ಥಾನದ ಬಳಿಯಿಂದ ಬೈನೆಗುಂಡಿ ರಸ್ತೆ ಅಭಿವೃದ್ಧಿ. ಬಾಲಂಬಿ ಚೆಟ್ಟೆಕಲ್ಲು ಜೋಡಿಯಿಂದ ಸಾರ್ವಜನಿಕ ರಸ್ತೆ ಅಭಿವೃದ್ಧಿ. ಎಂ.ಚೆAಬು ಬಳಿಯ ರೆಂಕಿಲ್ ಮೊಟ್ಟೆ ಕಾಲೋನಿ ರಸ್ತೆ ಅಭಿವೃದ್ಧಿಗೆ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಎ.ಎಸ್.ಪೊನ್ನಣ್ಣ ಅವರು ಅಭಿವೃದ್ದಿ ಕಾರ್ಯಕ್ಕೆ ಎಲ್ಲರೂ ಕೈಜೋಡಿಸಬೇಕು. ಇಲ್ಲಿನ ಗ್ರಾಮಸ್ಥರಿಗೆ ಮೂಲಭೂತ ಸೌಲಭ್ಯಗಳು ಮತ್ತಷ್ಟು ತಲುಪಿಸಬೇಕು ಎಂದು ಹೇಳಿದರು.
PublicNext
25/12/2024 11:05 am