ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಳ್ಳಕೆರೆ: ಮಲದ ಗುಂಡಿಯಲ್ಲಿ ಉಸಿರುಗಟ್ಟಿ ಕಾರ್ಮಿಕ ಸಾವು.

ಚಳ್ಳಕೆರೆ: ಜಿಲ್ಲೆಯಲ್ಲಿ ಘೋರ ದುರಂತವೊಂದು ಸಂಭವಿಸಿದ್ದು, ಮಲದ ಗುಂಡಿಯಲ್ಲಿ ಉಸಿರುಗಟ್ಟಿ ಕಾರ್ಮಿಕ ಸಾವನ್ನಪ್ಪಿರುವ ಘಟನೆ ನಡೆದಿದ್ದು ತಡವಾಗಿ ಬೆಳೆಕಿಗೆ ಬಂದಿದೆ. ಇದೇ ತಿಂಗಳು ಡಿ.18 ರಂದು ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಘಟನೆ ನಡೆದಿದೆ.

ಚಳ್ಳಕೆರೆ ನಗರದ ರಾಘವೆಂದ್ರ ಕಲ್ಯಾಣ ಮಂಟಪದ ಸಮೀಪ ಮಲದ ಗುಂಡಿಗೆ ಇಳಿದಿದ್ದ ಕಾರ್ಮಿಕರೊಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಮೇರೆಗೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಮೃತರನ್ನು ಗಾಂಧಿನಗರ ಬಡಾವಣೆಯ ರಂಗಸ್ವಾಮಿ (48) ಎಂದು ಗುರುತಿಸಲಾಗಿದ್ದು, ಈ ಸಂಬಂಧ ಚಳ್ಳಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Ashok M
PublicNext

PublicNext

25/12/2024 03:20 pm

Cinque Terre

20.7 K

Cinque Terre

0

ಸಂಬಂಧಿತ ಸುದ್ದಿ