ಕಜಕಿಸ್ತಾನ : 72 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಏಕಾಏಕಿ ಅಕಟು ವಿಮಾನ ನಿಲ್ದಾಣದಲ್ಲಿ ಪತನಗೊಂಡಿದ್ದು, ಕಝಾಕಿಸ್ತಾನದ ಅಕ್ಟೌ ನಗರದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಅಜರ್‌ಬೈಜಾನ್ ಏರ್‌ಲೈನ್ಸ್ ವಿಮಾನವು ಬಾಕುದಿಂದ ರಷ್ಯಾದ ಚೆಚೆನ್ಯಾದ ಗ್ರೋಜ್ನಿಗೆ ತೆರಳುತ್ತಿತ್ತು. ಆದರೆ ಗ್ರೋಜಿಯಲ್ಲಿ ಅತಿಯಾದ ಮಂಜು ಆವರಿಸಿದ ಮಾರ್ಗ ಬದಲಾಯಿಸಲಾಯಿತು ಎಂದು ಹೇಳಲಾಗುತ್ತಿದೆ.
ಅಪಘಾತದ ಮೊದಲು ವಿಮಾನ ನಿಲ್ದಾಣದ ಮೇಲೆ ಹಲವಾರು ಬಾರಿ ಸುತ್ತು ಹಾಕಿತ್ತಂತೆ. ಆಗ ಪೈಲಟ್ ಎಮರ್ಜೆನ್ಸಿ ಲ್ಯಾಂಡಿಂಗ್ಗೆ ಮನವಿ ಮಾಡಿದ್ದರಂತೆ. ಆದರೆ ಈಗ ವಿಮಾದಲ್ಲಿದ್ದ ಪ್ರಯಾಣಿಕರ ಪೈಕಿ 14 ಮಂದಿ ಬಚಾವ್ ಆಗಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಇನ್ನೂ ಈ ಘಟನೆಯಲ್ಲಿ ಹಲವರು ಮಂದಿ ಮೃತಪಟ್ಟಿದ್ದಾರೆ ಎಂದು ಶಂಕಿಸಲಾಗಿದೆ. ವಿಮಾನ ಪತನಗೊಂಡ ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಅಗ್ನಿಶಾಮಕ ದಳದ ದೌಡಾಯಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬಳಿಕ ಘಟನೆಯಲ್ಲಿ ಬದುಕುಳಿದವನ್ನು ಹತ್ತಿರದ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
PublicNext
25/12/2024 03:20 pm