ಹೈದರಾಬಾದ್: ಪುಷ್ಪಾ-2 ಸಿನಿಮಾ ಪ್ರೀಮಿಯರ್ ಶೋ ವೇಳೆ ಹೈದರಾಬಾದ್‌ನ ಸಂಧ್ಯಾ ಥಿಯೆಟರ್‌ನಲ್ಲಿ ಕಾಲ್ತುಳಿತ ಸಂಭವಿಸಿ ಮಹಿಳಾ ಅಭಿಮಾನಿ ಸಾವು ಕೇಸ್‌ಗೆ ಸಂಬಂಧಿಸಿದಂತೆ ಮೃತಳ ಕುಟುಂಬಕ್ಕೆ ನಟ ಅಲ್ಲು ಅರ್ಜುನ್ ಅವರ ತಂದೆ ಅಲ್ಲು ಅರವಿಂದ್ 2 ಕೋಟಿ ರೂಪಾಯಿ ಪರಿಹಾರ ಘೋಷಿಸಿದ್ದಾರೆ.
ಅಲ್ಲು ಅರ್ಜುನ್ ಕಡೆಯಿಂದ 1 ಕೋಟಿ ರೂ. ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ. ಇನ್ನು ಪುಷ್ಪ-2 ಸಿನಿಮಾ ನಿರ್ದೇಶಕರು ಹಾಗೂ ನಿರ್ಮಾಪಕರು ತಲಾ 50 ಲಕ್ಷ ರೂ.ನಂತೆ 1 ಕೋಟಿ ಸೇರಿ ಒಟ್ಟು 2 ಕೋಟಿ ರೂಪಾಯಿ ಪರಿಹಾರ ನೀಡುವುದಾಗಿ ತಿಳಿಸಿದ್ದಾರೆ.
ಥಿಯೇಟರ್‌ನಲ್ಲಿ ಸಂಭವಿಸಿದ ಕಾಲ್ತುಳಿತ ಘಟನೆಯಲ್ಲಿ ನಟ ಅಲ್ಲು ಅರ್ಜುನ್ ಅವರ ಅಭಿಮಾನಿ ರೇವತಿ ಮೃತಪಟ್ಟಿದ್ದರು. ಆಕೆಯ ಮಗ ಶ್ರೀಜಾ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮಹಿಳಾ ಅಭಿಮಾನಿ ಸಾವು ಘಟನೆ ಬಗ್ಗೆ ತೀವ್ರ ಖೇದ ವ್ಯಕ್ತಪಡಿಸಿದ್ದ ಅಲ್ಲು ಅರ್ಜುನ್ 25 ಲಕ್ಷ ಪರಿಹಾರ ನೀಡುವುದಾಗಿ ತಿಳಿಸಿದ್ದರು. ಆದರೆ ಕೇವಲ ಘೋಷಣೆ ಮಾತ್ರ ಮಾಡಿದ್ದಾರೆ ಪರಿಹಾರ ನೀಡಿಲ್ಲ ಎಂಬ ಆರೋಪ ಕೂಡ ಕೇಳಿಬಂದಿತ್ತು.
PublicNext
25/12/2024 06:22 pm