ಧಾರವಾಡ: ಧಾರವಾಡದ ಹಿರಿಯ ಸಾಹಿತಿ ಡಾ.ಸಿದ್ಧಲಿಂಗ ಪಟ್ಟಣಶೆಟ್ಟಿ ಅವರ ಮೊದಲ ಕವಲ ಸಂಕಲನ "ನೀನಾ 60" ಕವನ ಸಂಕಲನಕ್ಕೆ 60 ವರ್ಷ ತುಂಬಿದ ಹಿನ್ನೆಲೆ ಧಾರವಾಡದಲ್ಲಿ ವಿಶೇಷಾಂಕ ಕೃತಿ ಬಿಡುಗಡೆ ಮಾಡಲಾಗಿದೆ.
ಧಾರವಾಡದ ರಂಗಾಯಣದ ಸಾಂಸ್ಕೃತಿಕ ಸಭಾಭವನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮೂರು ತಲೆಮಾರಿನ ಸಾಹಿತ್ಯಾಸಕ್ತರನ್ನೊಳಗೊಂಡ ವಿಶೇಷಾಂಕವನ್ನು ಬಿಡುಗಡೆ ಮಾಡಲಾಗಿದೆ. ಸಿದ್ಧಲಿಂಗ ಪಟ್ಟಣಶೆಟ್ಟಿ ಅವರು 24 ವರ್ಷ ವಯಸ್ಸಿನವರಿದ್ದಾಗ "ನೀನಾ 60" ಎಂಬ ಕವನ ಸಂಕಲನ ರಚಿಸಿದ್ದರು. ಅದಕ್ಕೆ 60 ವರ್ಷ ತುಂಬಿದ ಹಿನ್ನೆಲೆಯಲ್ಲಿ ಮೂರು ತಲೆಮಾರಿನ ಸಾಹಿತ್ಯಾಸಕ್ತರನ್ನೊಳಗೊಂಡ ವಿಶೇಷಾಂಕವನ್ನು ಬಿಡುಗಡೆ ಮಾಡಲಾಗಿದೆ.
ಹಿರಿಯ ಸಾಹಿತಿ ಡಾ.ಸಿದ್ಧಲಿಂಗ ಪಟ್ಟಣಶೆಟ್ಟಿ, ಹಿರಿಯ ಪತ್ರಕರ್ತ ರಘುನಾಥ ಚ.ಹ., ದೇವು ಪತ್ತಾರ, ಕತೆಗಾರ್ತಿ ರೂಪಾ ಜೋಶಿ, ಹೇಮಾ ಪಟ್ಟಣಶೆಟ್ಟಿ ಸೇರಿದಂತೆ ಅನೇಕರು ಈ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
25/12/2024 06:33 pm