ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಅಂಬೇಡ್ಕರ್ ನೀಡಿದ ಸ್ವಾತಂತ್ರ್ಯ ಕಸಿದುಕೊಳ್ಳಲು ಪಿತೂರಿ- ದಲಿತ ಮುಖಂಡ ಜಯನ್ ಮಲ್ಪೆ ಆಕ್ರೋಶ

ಉಡುಪಿ: ಸಂಸತ್ ಅಧಿವೇಶನದಲ್ಲಿ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಕುರಿತು ಕೇಂದ್ರ ಸಚಿವ ಅಮಿತ್ ಶಾ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಅಂಬೇಡ್ಕರ್ ಯುವಸೇನೆ ವತಿಯಿಂದ ಅಜ್ಜರಕಾಡು ಹುತಾತ್ಮ ಸ್ಮಾರಕ ಬಳಿ ಪ್ರತಿಭಟನೆ ನಡೆಸಲಾಯಿತು.

ನೂರಾರು ಸಂಖ್ಯೆಯಲ್ಲಿ ಸೇರಿದ್ದ ಪ್ರತಿಭಟನಾಕಾರರು ಕೇಂದ್ರ ಸಚಿವ ಅಮಿತ್ ಶಾ ವಿರುದ್ಧ ದಿಕ್ಕಾರ ಕೂಗಿದರು. ಅಮಿತ್ ಶಾರನ್ನು ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಎಂದು‌ ಒತ್ತಾಯಿಸಿದರು.

ಜನಪರ ಹೋರಾಟಗಾರ ಜಯನ್ ಮಲ್ಪೆ ಮಾತನಾಡಿ, ದೇಶದಲ್ಲಿ ಬ್ರಾಹ್ಮಣ್ಯವಾದವನ್ನು ಹೇರಬೇಕು, ಅಂಬೇಡ್ಕರ್ ನೀಡಿದ ಸ್ವಾತಂತ್ರ್ಯ ವನ್ನು ಕಸಿದುಕೊಳ್ಳಬೇಕು ಮತ್ತು ಸಂವಿಧಾನವನ್ನು ನಾಶ ಮಾಡಬೇಕೆಂಬ ಪಿತೂರಿ ಅಮಿತ್ ಶಾ ಹೇಳಿಕೆಯ ಹಿಂದೆ ಅಡಗಿದೆ. ಸಂವಿಧಾನ, ಪ್ರಜಾಪ್ರಭುತ್ವವನ್ನು ರಕ್ಷಣೆ ಮಾಡಬೇಕಾದ ಇವರೇ ಕಂಟಕ ಆಗಿ ಬಿಟ್ಟಿದ್ದಾರೆ. ನಾಶ ಮಾಡುವ ಹೇಳಿಕೆ ನೀಡುತ್ತಿದ್ದಾರೆ. ಅಂಬೇಡ್ಕರ್ ನೀಡಿದ ಸಂವಿಧಾನ ಹಾಗೂ ಬುದ್ಧ ಚಿಂತನೆಯನ್ನು ಹಂತಹಂತವಾಗಿ ನಾಶ ಮಾಡುವ ಉದ್ದೇಶ ಇವರದ್ದಾಗಿದೆ. ಇದು ಇವರಿಗೆ ಈ ಜನ್ಮದಲ್ಲಿ ಸಾಧ್ಯವಿಲ್ಲ. ಸಂಘಪರಿವಾರ ಈ ಕುತಂತ್ರ ಯಶಸ್ವಿಯಾಗಲು ನಾವು ಬಿಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಹಿರಿಯ ಚಿಂತಕ ನಾರಾಯಣ ಮಣೂರು, ಸಹಬಾಳ್ವೆ ಅಧ್ಯಕ್ಷ ಅಮೃತ್ ಶೆಣೈ, ದಲಿತ ಮುಖಂಡ ಶೇಖರ್ ಹಾವಂಜೆ ಮಾತನಾಡಿದರು. ಈ ಸಂದರ್ಭದಲ್ಲಿ ಅಂಬೇಡ್ಕರ್ ಮನುಸ್ಮೃತಿ ಸುಟ್ಟ ದಿನದ ಅಂಗವಾಗಿ ಮನುಸ್ಮೃತಿಯನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಲಾಯಿತು.

Edited By : PublicNext Desk
Kshetra Samachara

Kshetra Samachara

25/12/2024 07:05 pm

Cinque Terre

2.89 K

Cinque Terre

0

ಸಂಬಂಧಿತ ಸುದ್ದಿ