ಬೆಳಗಾವಿ : ಸಿಟಿ ರವಿ ಅವರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾನಾಪುರ ಠಾಣೆಯ ಸಿಪಿಐ ಮಂಜುನಾಥ್ ನಾಯಕ್ ಅವರನ್ನು ಅಮಾನತು ಮಾಡಲಾಗಿದೆ. ರಾಜಕೀಯ ಮುಖಂಡರ ಠಾಣೆ ಪ್ರವೇಶ ಮತ್ತು ಕರ್ತವ್ಯ ಲೋಪದ ಆರೋಪದ ಮೇಲೆ ಈ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರದ ಆದೇಶದ ವಿರುದ್ದ ಬಿಜೆಪಿ ನಾಯಕರು ತಿರುಗಿ ಬಿದ್ದು ಬಂದ್ ಗೆ ಕರೆ ನೀಡಿದ್ದಾರೆ.
ವಿಧಾನ ಪರಿಷತ್ತಿನ ಕೊನೆಯ ದಿನದ ಅಧಿವೇಶನದ ವೇಳೆ ನಡೆದ ವಿದ್ಯಮಾನದ ನಂತರ, ಸಭಾಪತಿ ಬಸವರಾಜ ಹೊರಟ್ಟಿ, ಯಾವುದೇ ಬಲವಾದ ದಾಖಲೆಗಳು ಇಲ್ಲವೆಂದು ಸಿ.ಟಿ.ರವಿಗೆ ಕ್ಲೀನ್ ಚಿಟ್ ನೀಡಿದ್ದರು. ಇದಾದ ಬೆನ್ನೆಲ್ಲೇ, ರವಿ ವಿರುದ್ದ ಎಫ್ಐಆರ್ ದಾಖಲಾಗಿ, ಅವರನ್ನು ಬಂಧಿಸಲಾಗಿತ್ತು.
ಇವರನ್ನು ಬಂಧಿಸಿದ ನಂತರ, ನ್ಯಾಯಾಲಯದ ಮುಂದೆ ಹಾಜರು ಪಡಿಸದೇ ಹಲವು ಪ್ರದೇಶಗಳಲ್ಲಿ ರಾತ್ರಿಯಿಡೀ ಸುತ್ತಾಡಿಸಲಾಗಿತ್ತು. ಆ ವೇಳೆ, ಖಾನಾಪುರ ಠಾಣೆಯಲ್ಲಿ ಬಿಜೆಪಿ ನಾಯಕರನ್ನು ಒಳಬಿಟ್ಟಿದ ತಪ್ಪಿಗೆ, ಠಾಣೆಯ ಸಿಪಿಐ ಮಂಜುನಾಥ್ ನಾಯಕ್ ಅವರನ್ನು ಅಮಾನತು ಮಾಡಿ, ಐಜಿಪಿ ಆದೇಶ ಹೊರಡಿಸಿದ್ದಾರೆ.
PublicNext
25/12/2024 08:34 pm