ನವಲಗುಂದ: ದೇಶ ಸೇವೆಗಾಗಿ ಜೀವ ಮುಡಿಪಿಟ್ಟ ಈ ಹುತಾತ್ಮ ಯೋಧರ ತ್ಯಾಗ, ಬಲಿದಾನವನ್ನು ನಾವು ಸದಾಕಾಲ ಸ್ಮರಿಸಬೇಕು. ಮೃತ ಯೋಧರ ಆತ್ಮಕ್ಕೆ ಶಾಂತಿ ನೀಡಲಿ ಹಾಗೂ ಅವರ ಕುಟುಂಬ ವರ್ಗಕ್ಕೆ ಈ ನೋವು ಭರಿಸುವ ಶಕ್ತಿ ನೀಡಲಿ ಎಂದು ಪವನ ಪಾಟೀಲ ಹೇಳಿದರು.
ಪಟ್ಟಣದ ಗಾಂಧಿ ಮಾರುಕಟ್ಟೆಯಲ್ಲಿ ಜಮ್ಮು ಕಾಶ್ಮೀರದ ಪೂಂಛ್ ಬಳಿ ಸೇನಾ ವಾಹನ ಅಪಘಾತಕ್ಕೀಡಾಗಿ ಕನ್ನಡಿಗರು ಹುತಾತ್ಮರಾದ ಹಿನ್ನಲೆ ನಗರದ ಜನತೆ ಕ್ಯಾಂಡಲ್ ಹಿಡಿದು ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.
ಈ ವೇಳೆ ಹುತಾತ್ಮರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಮೌನಾಚರಣೆ ಮಾಡಿದರು. ಹಿರಿಯರು, ಯುವಕರು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಯೋಧರಿಗೆ ಗೌರವ ನಮನ ಸಲ್ಲಿಸಿದರು.
Kshetra Samachara
25/12/2024 08:34 pm