ಬೀದರ್ : ಕೇವಲ ಹತ್ತು ರೂಪಾಯಿ ಕೊಡಲಿಲ್ಲ ಎನ್ನುವ ಕಾರಣಕ್ಕಾಗಿ ಕೋಪಗೊಂಡ ಯುವಕನೊಬ್ಬ ವ್ಯಕ್ತಿ ಮೇಲೆ ಚಾಕುವಿನಿಂದ ಇರಿದು ಹಲ್ಲೆ ಮಾಡಿ ಗಾಯಗೊಳಿಸಿದ ಘಟನೆ ಬಸವಕಲ್ಯಾಣ ತಾಲೂಕಿನ ಮಂಗಳೂರ ಗ್ರಾಮದಲ್ಲಿ ಮಂಗಳವಾರ ಸಂಜೆ ಜರುಗಿದೆ.
ಗ್ರಾಮದ ನಿವಾಸಿ ಮೈನುದ್ದೀನ್ ಅಹಮದ್ ಸಾಬ್ ಫುಲಾರೆ (45) ವರ್ಷ ಗಾಯಗೊಂಡ ವ್ಯಕ್ತಿಯಾಗಿದ್ದಾನೆ.
ಅದೇ ಗ್ರಾಮದ ನಿವಾಸಿ ಸುನಿಲ್ ಪಾಟೀಲ್ ಎನ್ನುವ ವ್ಯಕ್ತಿ ಮೈನೊದ್ದಿನ್ ಎನ್ನುವಾತನಿಗೆ ರೂ. 10 ಕೇಳಿದ್ದಾನೆ. ಹಣ ನೀಡಲು ನಿರಾಕರಿಸಿದ ಕಾರಣಕ್ಕಾಗಿ ಕೋಪಗೊಂಡ ಸುನಿಲ್ ಮೈನೊದ್ದಿನ್ ಮೇಲೆ ಚಾಕುವಿನಿಂದ ಇರಿದು ಗಾಯಗೊಳಿಸಿದ್ದಾನೆ. ಗಾಯಾಳು ವ್ಯಕ್ತಿಯನ್ನು ಮುಡಬಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕಲ್ಬುರ್ಗಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಈ ಕುರಿತು ಮುಡಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಬಂಧನಕ್ಕಾಗಿ ಪೊಲೀಸರು ಜಾಲ ಬಿಸಿದ್ದಾರೆ.
Kshetra Samachara
25/12/2024 08:47 pm