ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ವಾಯುಭಾರ ಕುಸಿತ : ರಾಜ್ಯದ ಹಲವೆಡೆ 2-3 ದಿನ ಭಾರಿ ‘ಮಳೆ’ ಮುನ್ಸೂಚನೆ

ಬೆಂಗಳೂರು : ಕರ್ನಾಟಕದ ಹಲವೆಡೆ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರ್ನಾಟಕದ 19ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿ.28ರವರೆಗೂ ಮಳೆಯಾಗಲಿದೆ.

ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆಯಾಗಲಿದೆ.

ರಾಜ್ಯದಲ್ಲಿ ಚಳಿಯ ಪ್ರಮಾಣ ಕಡಿಮೆ ಇದೆ, ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗುತ್ತಿದ್ದು, ತಮಿಳುನಾಡು, ಆಂಧ್ರಪ್ರದೇಶದ ಜತೆ ಕರ್ನಾಟಕದಲ್ಲೂ ಮಳೆಯಾಗಲಿದೆ ಎನ್ನುವ ಎಚ್ಚರಿಕೆ ನೀಡಲಾಗಿದೆ.

ದಾವಣಗೆರೆಯಲ್ಲಿ 16.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು ಶುಕ್ರವಾರ ಮಳೆಯಾಗುವ ಸಾಧ್ಯತೆ ಇದೆ.

Edited By : Abhishek Kamoji
PublicNext

PublicNext

26/12/2024 07:50 am

Cinque Terre

151.05 K

Cinque Terre

0

ಸಂಬಂಧಿತ ಸುದ್ದಿ