ಹುಬ್ಬಳ್ಳಿ: ಪ್ರತ್ಯೇಕ ಸ್ಥಳದಲ್ಲಿ ಮನೆಗೆ ತೆರಳುತ್ತಿದ್ದ ಮಹಿಳೆಯರ ಕುತ್ತಿಗೆಯಲ್ಲಿದ್ದ ಬಂಗಾರದ ಸರವನ್ನು, ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತರು ಸರಎಗರಿಸಿ ಪರಾರಿಯಾಗಿರುವ ಘಟನೆ ಹಳೇಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹುಬ್ಬಳ್ಳಿಯ ಕೋಟಿಲಿಂಗ ನಗರ ಮತ್ತು ಆರ್.ಎನ್.ಶೆಟ್ಟಿ ಕ್ರಾಸ್ ಬಳಿಯಲ್ಲಿ ಮಹಿಳೆಯ ಸರವನ್ನು ಕಳ್ಳತನ ಮಾಡಲಾಗಿದೆ. ರಸ್ತೆಯ ಬದಿಯಲ್ಲಿ ತೆರಳುತ್ತಿದ್ದ ಮಹಿಳೆಯರನ್ನು ಗುರಿಯಾಗಿಸಿಕೊಂಡು ಅಪರಿಚಿತರು, ಪ್ರತ್ಯೇಕ ಸ್ಥಳದಲ್ಲಿ ಒಂದೇ ಸಮಯದಲ್ಲಿ ಟಾರ್ಗೆಟ್ ಮಾಡಿ ಕೊರಳಲ್ಲಿನ ಬಂಗಾರದ ಸರವನ್ನು ಕಿತ್ತುಕೊಂಡು ಪರಾರಿಯಾಗಿದ್ದಾರೆ.
ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಡಿಸಿಪಿ ನಂದಗಾವಿ ಆಗಮಿಸಿದ್ದು, ಶೀಘ್ರ ಕಳ್ಳರ ಬಂಧನಕ್ಕೆ ಸೂಚನೆ ಕೊಟ್ಟಿದ್ದಾರೆ. ಅದರಂತೆ ಹಳೇಹುಬ್ಬಳ್ಳಿ ಠಾಣೆಯ ಪೊಲೀಸರು ಆರೋಪಿಗಳ ಪತ್ತೆಗೆ ಕ್ರಮ ಕೈಗೊಂಡಿದ್ದಾರೆ.
Kshetra Samachara
26/12/2024 09:04 am