ಮಂಗಳೂರು: ಕಾಡುಹಂದಿಯೊಂದು ಸೂಪರ್ ಮಾರ್ಕೆಟ್‌ಗೆ ನುಗ್ಗಿದ ಘಟನೆ ಗಡಿಭಾಗದ ಕಾಸರಗೋಡು ಜಿಲ್ಲೆಯ ಕುಂಬಳೆಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.
ಕುಂಬಳೆ ಪೇಟೆಯಲ್ಲಿರುವ ಸೂಪರ್ ಪಾಯಿಂಟ್ ಹೈಪರ್ ಮಾರ್ಕೆಟ್ ನೊಳಗೆ ಮಂಗಳವಾರ ರಾತ್ರಿ 9 ಗಂಟೆಯ ವೇಳೆ ಕಾಡು ಹಂದಿ ಸೂಪರ್ ಮಾರ್ಕೆಟ್‌ಗೆ ನುಗ್ಗಿದೆ. ಈ ವೇಳೆ ಬೆರಳೆಣಿಕೆಯ ಗ್ರಾಹಕರು ಹಾಗೂ ಸಿಬ್ಬಂದಿ ಮಾತ್ರ ಎನ್ನಲಾಗಿದೆ.
ಅನಿರೀಕ್ಷಿತವಾಗಿ ಒಳಗೆ ಬಂದ ಹಂದಿಯನ್ನು ಕಂಡು ಗಲಿಬಿಲಿಗೊಂಡ ಸಿಬ್ಬಂದಿ ಹಾಗೂ ಇತರರು ಬೊಬ್ಬೆ ಹಾಕುವಷ್ಟರಲ್ಲಿ ಹಂದಿ ಹೊರಕ್ಕೆ ಓಡಿ ಹೋಗಿದೆ. ಬಳಿಕ ಹಂದಿ ಶಾಲಾ ರಸ್ತೆಯತ್ತ ಪರಾರಿಯಾಗಿದೆ ಎನ್ನಲಾಗಿದೆ.
PublicNext
26/12/2024 09:10 am