ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಉಡೇವಾ ಗ್ರಾಮದ ಸಮೀಪ ಸಲಗವೊಂದು ವಿದ್ಯುತ್ ಸ್ಪರ್ಶಿಸಿ ಸಾವನ್ನಪ್ಪಿದೆ. ಕಂದಕವನ್ನು ದಾಟುವಾಗ ಜೋತು ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಸಲಗ ಸತ್ತಿರಬಹುದು ಎಂದು ಅಂದಾಜಿಸಲಾಗಿದೆ.
ಮಾಹಿತಿ ತಿಳಿದ ಆರ್ ಎಫ್ ಒ ಆಸೀಫ್ ಅಹಮದ್ ನೇತೃತ್ವದ ಅರಣ್ಯ ಇಲಾಖೆ ಅಧಿಕಾರಿಗಳು, ಸಿಬ್ಬಂದಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಇಂದು ಮೇಲಾಧಿಕಾರಿಗಳ ಸಮ್ಮುಖದಲ್ಲಿ ಮೃತ ಆನೆಯ ಮರಣೋತ್ತರ ಪರೀಕ್ಷೆ ನಡೆಸಿ ಕಳೇಬರದ ದಹನ ಕ್ರಿಯೆ ನಡೆಸಲಾಗುವುದು.
Kshetra Samachara
26/12/2024 12:09 pm