ಹುಬ್ಬಳ್ಳಿ: ಉಣಕಲ್ ನಲ್ಲಿ ನಡೆದಿದ್ದ ಸಿಲಿಂಡರ್ ಬ್ಲ್ಯಾಸ್ಟ್ ಪ್ರಕರಣದಲ್ಲಿ ಗಂಭೀರವಾಗಿ ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ 9 ಜನ ಅಯ್ಯಪ್ಪ ಮಾಲಾಧಾರಿಗಳ ಪೈಕಿ ಇಬ್ಬರು ಮಾಲಾಧಾರಿಗಳು ಚಿಕಿತ್ಸೆ ಫಲಕಾರಿಯಾಗದೆ ಕಿಮ್ಸ್ ಆಸ್ಪತ್ರೆಯಲ್ಲಿ ಮೃತಪಟ್ಟ ಹಿನ್ನೆಲೆ ಕಿಮ್ಸ್ ಆಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಭೇಟಿ ನೀಡಿದರು.
ಕಿಮ್ಸ್ ಶವಾಗಾರದಲ್ಲಿ ಮೃತಪಟ್ಟ ಸಂಜಯ ಹಾಗೂ ನಿಜಲಿಂಗಪ್ಪರವರ ಮೃತದೇಹವನ್ನು ಮರಣೋತ್ತರ ಪರೀಕ್ಷೆ ನಡೆಸಲಾಗಿತ್ತು.ಹೀಗಾಗಿ ಸಚಿವ ಸಂತೋಷ್ ಲಾಡ್ ಮಾಹಿತಿ ತಿಳಿಯುತ್ತಿದ್ದ ಹಾಗೆ ಬೆಳಗಾವಿಯಿಂದ ಕಿಮ್ಸ್ ಶವಾಗಾರಕ್ಕೆ ಭೇಟಿ ನೀಡಿ ಮೃತರ ಅಂತಿಮ ದರ್ಶನವನ್ನು ಪಡೆದು ಕುಟುಂಬಸ್ಥರಿಗೆ ಸಂತೈಸುವ ಕಾರ್ಯವನ್ನು ಮಾಡಿದರು.ಅಷ್ಟೇ ಅಲ್ಲದೇ ಕಿಮ್ಸ್ ವೈದ್ಯರ ಜೊತೆ ಚಿಕಿತ್ಸೆ ಪಡೆಯುತ್ತಿರುವ ಅಯ್ಯಪ್ಪ ಮಾಲಾಧಾರಿಗಳ ಆರೋಗ್ಯದ ಬಗ್ಗೆ ವಿಚಾರಣೆ ನಡೆಸಿದರು.
ಅಷ್ಟೇ ಅಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಯವರ ಜೊತೆ ಈ ಕುರಿತು ಮಾತನಾಡಿ ವಿಶೇಷ ಪ್ರಕರಣ ಎಂದು ಪರಿಗಣಿಸಿ ಮೃತರ ಕುಟುಂಬದವರಿಗೆ ಸಿಎಂ ಪರಿಹಾರ ನಿಧಿಯಿಂದ 5 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ಈ ದುರ್ಘಟನೆ ಬಳಿಕ ಎಲ್ಲ ಅಯ್ಯಪ್ಪ ಮಾಲಾಧಾರಿಗಳು ಎಚ್ಚರವಾಗಿರಬೇಕು. ಅವರು ವಾಸ್ತವ್ಯ ಮಾಡುವ ಸನ್ನಿಧಿಯಲ್ಲಿ ಸುರಕ್ಷತೆಯ ಬಗ್ಗೆ ಕಾಳಜಿಯನ್ನು ವಹಿಸಿ ಜಾಗೃತರಾಗಿರಬೇಕು ಎಂದು ಸಚಿವ ಸಂತೋಷ್ ಲಾಡ್ ಮನವಿಯನ್ನು ಮಾಡಿಕೊಂಡಿದ್ದಾರೆ.
ವಿನಯ ರೆಡ್ಡಿ, ಕ್ರೈಂ ಬ್ಯುರೋ, ಪಬ್ಲಿಕ್ ನೆಕ್ಸ್ಟ್
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
26/12/2024 01:11 pm