ಚಿತ್ರದುರ್ಗ : ಖಾಸಗಿ ಶಾಲೆ ಆವರಣವೊಂದರಲ್ಲಿ ನಾಯಿ ಕಚ್ಚಿದ ಸ್ಥಿತಿಯಲ್ಲಿ ಅರ್ಧ ದೇಹವಿರುವ ಶಿಶುವಿನ ಶವ ಪತ್ತೆಯಾದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ನಗರದ ಚಳ್ಳಕೆರೆ ಗೇಟ್ ಬಳಿಯ ಶಾಲೆ ಆವರಣದಲ್ಲಿ ಅರ್ಧ ದೇಹವಿರುವ ಶವ ಪತ್ತೆಯಾಗಿದೆ. ಹೊರವಲಯದಲ್ಲಿರುವ ಖಾಸಗಿ ಆಸ್ಪತ್ರೆ ಆವರಣದಿಂದ ನಾಯಿಗಳು ಶಿಶುವನ್ನು ಎಳೆದು ತಂದಿರುವ ಶಂಕೆ ವ್ಯಕ್ತವಾಗಿದೆ. ಅಲ್ಲದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಶಿಶುವನ್ನು ಸರಿಯಾಗಿ ಅಂತ್ಯಕ್ರಿಯೆ ನಡೆಸದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕಿಸಿದ್ದಾರೆ.
ಘಟನಾ ಸ್ಥಳಕ್ಕೆ ಚಿತ್ರದುರ್ಗ ಡಿವೈಎಸ್ಪಿ ದಿನಕರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
PublicNext
26/12/2024 01:52 pm