ಮಂಗಳೂರು: 2019ರಿಂದ ಆಯೋಜಿಸಿಕೊಂಡು ಬಂದಿರುವ ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಯೋಜನೆಯ “ನೆರವು” ಸಹಾಯಹಸ್ತ ಪ್ರದಾನ ಕಾರ್ಯಕ್ರಮ ಬುಧವಾರ ಸಂಜೆ ಗೋಲ್ಡ್ ಫಿಂಚ್ ಸಿಟಿಯಲ್ಲಿ ನಡೆಯಿತು.
ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು.
ಬೆಂಗಳೂರಿನ ಅದಮ್ಯ ಚೇತನ ಫೌಂಡೇಶನ್ ಅಧ್ಯಕ್ಷೆ ಹಾಗೂ ಸಹ- ಸಂಸ್ಥಾಪಕಿ ಡಾ. ತೇಜಸ್ವಿನಿ ಅನಂತಕುಮಾರ್ ಭಾಗವಹಿಸಿ ಮಾತನಾಡಿದ ಅವರು, “ಶಿಕ್ಷಣದಲ್ಲಿ ಸಾಧನೆ ಮಾಡಿರುವ ವಿದ್ಯಾರ್ಥಿಗಳು, ವಿಶೇಷ ಚೇತನ ಮಕ್ಕಳು, ಸಾಮಾಜಿಕ ಸಂಘಟನೆಗಳಿಗೆ ಬೆಂಬಲ ನೀಡುತ್ತಿರುವ ಪ್ರಕಾಶ್ ಶೆಟ್ಟಿಯವರ ನೆರವು ಕಾರ್ಯಕ್ರಮ ಶ್ಲಾಘನೀಯ. ನಾವೇ ಹುಡುಕಿಕೊಂಡು ಹೋಗಿ ಅರ್ಹರಿಗೆ ನೆರವು ನೀಡುವ ಮಾದರಿ ಕಾರ್ಯಕ್ರಮ ಇದಾಗಿದೆ.
ಇಲ್ಲಿ ಆರ್ಥಿಕ ಸಹಾಯ ಪಡೆದಿರುವ ಮಕ್ಕಳು ಮುಂದಿನ ದಿನಗಳಲ್ಲಿ ಇನ್ನಷ್ಟು ಸಾಧನೆಯನ್ನು ಮಾಡಿ ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಕೊಳ್ಳುವ ವಿಶ್ವಾಸವಿದೆ“ ಎಂದರು.
Kshetra Samachara
26/12/2024 01:58 pm