ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಕೊಡಚಾದ್ರಿ ಸಮೀಪ ಜೀಪ್ ಮತ್ತು ಟೆಂಪೊ ಟ್ರಾವಲರ್ ನಡುವೆ ಮುಖಾಮುಖಿ ಡಿಕ್ಕಿಯಾಗಿ 8 ಜನರಿಗೆ ಗಂಭೀರ ಗಾಯಗೊಂಡಿದ್ದಾರೆ. ಇನ್ನು ಗಂಭೀರ ಗಾಯಗೊಂಡ ಗಾಯಾಳಗಳನ್ನ ಕುಂದಾಪುರದ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೊಸನಗರ ತಾಲೂಕು ನಿಟ್ಟೂರು ಸಮೀಪದ ಮರಕುಟಿಗ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ.
ಕೊಲ್ಲೂರಿನಿಂದ ಕೊಡಚಾದ್ರಿಗೆ ತೆರಳುತ್ತಿದ್ದ ಜೀಪ್, ಶಿವಮೊಗ್ಗ ಕಡೆಯಿಂದ ತೆರಳುತ್ತಿದ್ದ ಟಿ.ಟಿ. ವಾಹನ ಮುಖಾಮುಖಿ ಡಿಕ್ಕಿಯಾಗಿವೆ. ಗಾಯಗೊಂಡವರು ಕೇರಳದಿಂದ ಬಂದಿದ್ದ ಪ್ರವಾಸಿಗರು ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಕುಂದಾಪುರದ ಆಸ್ಪತ್ರೆಗೆ ರವಾನಿಸಲಾಗಿದೆ. ನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
PublicNext
26/12/2024 01:59 pm