ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಮೊಬೈಲ್ ನೋಡದಂತೆ ಬುದ್ಧಿ ಹೇಳಿದ್ದಕ್ಕೆ ವಿಷ ಸೇವಿಸಿ ಪದವಿ ವಿದ್ಯಾರ್ಥಿನಿ ಸಾವು

ಶಿವಮೊಗ್ಗ : ಮೊಬೈಲ್‌ ನೋಡದಂತೆ ತಾಯಿ ಬುದ್ದಿ ಹೇಳಿದ್ದಕ್ಕೆ ಮನನೊಂದು ವಿಷ ಸೇವಿಸಿದ್ದ ಪದವಿ ವಿದ್ಯಾರ್ಥಿನಿಯೊಬ್ಬಳು ಇಂದು ಸಾವನ್ನಪ್ಪಿದ್ದಾಳೆ. ಶಿವಮೊಗ್ಗ ಮೆಗ್ಗಾನ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಆಕೆ ಕೊನೆಯುಸಿರೆಳೆದಿದ್ದಾಳೆ.

ಶಿವಮೊಗ್ಗ ತಾಲೂಕಿನ ಹಾರನಹಳ್ಳಿಯ ಧನುಶ್ರೀ (20) ಮೃತ ವಿದ್ಯಾರ್ಥಿನಿ. ಮನೆಯಲ್ಲಿ ಓದುವುದನ್ನು ಬಿಟ್ಟು ಮೊಬೈಲ್‌ ಹಿಡಿದುಕೊಂಡಿದ್ದಕ್ಕೆ ತಾಯಿ ಬೈದಿದ್ದರಿಂದ ಮನನೊಂದು ಧನುಶ್ರೀ ಕಳೆನಾಶಕ ಸೇವಿಸಿದ್ದಳು. ಕೂಡಲೆ ಆಕೆಯನ್ನು ಆಯನೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲು ಕರೆದೊಯ್ಯಲಾಗಿತ್ತು.

ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್‌ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಯುವತಿ ಇಂದು ಸಾವನ್ನಪ್ಪಿದ್ದಾಳೆ. ಈ ಸಂಬಂಧ ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Edited By : Nirmala Aralikatti
PublicNext

PublicNext

26/12/2024 02:03 pm

Cinque Terre

14.62 K

Cinque Terre

1

ಸಂಬಂಧಿತ ಸುದ್ದಿ