ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ವೀರಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ಸಿಎಂ ಸಿದ್ಧರಾಮಯ್ಯ

ಬೆಳಗಾವಿ: ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಜರುಗಿದ ಕಾಂಗ್ರೆಸ್ ಅಧಿವೇಶನದ ಶತಮಾನೊತ್ಸವದ ಅಂಗವಾಗಿ ನಗರದ ಟಿಳಕವಾಡಿಯಲ್ಲಿನ ವೀರಸೌಧದಲ್ಲಿ ಗುರುವಾರ (ಡಿ.26) ಮಹಾತ್ಮಾ ಗಾಂಧೀಜಿಯವರ ನೂತನ ಪ್ರತಿಮೆಯನ್ನು ಸಿಎಂ ಸಿದ್ಧರಾಮಯ್ಯ‌ ಅನಾವರಣಗೊಳಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ತದನಂತರ ವೀರಸೌಧದ ಆವರಣದಲ್ಲಿನ ಗಾಂಧಿ ಸ್ಮಾರಕ ಭವನದಲ್ಲಿನ ನವೀಕೃತ ಪೋಟೋ ಗ್ಯಾಲರಿಯನ್ನು‌ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಉದ್ಘಾಟಿಸಿದರು.

ಇದೇ ವೇಳೆ ವೀರಸೌಧ(ಕಾಂಗ್ರೆಸ್ ಬಾವಿ) ಆವರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ಸಸಿ ನೆಟ್ಟು ನೀರೆರೆದರು.

ಈ ಸಂದರ್ಭದಲ್ಲಿ ಸಚಿವರಾದ ಎಚ್.ಕೆ.ಪಾಟೀಲ, ಎಂ.ಬಿ.ಪಾಟೀಲ, ಎಚ್.ಸಿ.ಮಹದೇವಪ್ಪ, ಲಕ್ಷ್ಮೀ ಹೆಬ್ಬಾಳಕರ್, ಶರಣಬಸಪ್ಪ ದರ್ಶನಾಪುರ, ಕೆ.ಎಚ್.ಮುನಿಯಪ್ಪ, ಶಾಸಕರಾದ ಆಸಿಫ್ (ರಾಜು) ಸೇಠ್, ಪರಿಷತ್ ಸದಸ್ಯ‌ ಚನ್ನರಾಜ್ ಹಟ್ಟಿಹೊಳಿ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ಮಾಜಿ ಆರ್.ವಿ.ದೇಶಪಾಂಡೆ, ಸರಕಾರದ ಮುಖ್ಯ ಸಚೇತಕ ಅಶೋಕ‌‌ ಪಟ್ಟಣ, ಬುಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ವಾರ್ತಾ ಇಲಾಖೆಯ ಕಾರ್ಯದರ್ಶಿ ಕಾವೇರಿ ಬಿ.ಬಿ., ಆಯುಕ್ತರಾದ ಹೇಮಂತ್ ನಿಂಬಾಳ್ಕರ್, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಒಂ ಸಿಇಓ ರಾಹುಲ್ ಶಿಂಧೆ, ವಾರ್ತಾ ಇಲಾಖೆಯ ಜಂಟಿ ನಿರ್ದೇಶಕರಾದ ಮಂಜುನಾಥ ಡೊಳ್ಳಿನ, ಉಪ ನಿರ್ದೆಶಕರಾದ ಗುರುನಾಥ ಕಡಬೂರ ಮತ್ತಿತರರು ಉಪಸ್ಥಿತರಿದ್ದರು.

Edited By : Ashok M
PublicNext

PublicNext

26/12/2024 02:07 pm

Cinque Terre

21.94 K

Cinque Terre

0

ಸಂಬಂಧಿತ ಸುದ್ದಿ