ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ದೊಡ್ಡಬಳ್ಳಾಪುರ: ತಹಶೀಲ್ದಾರ್, ಎಸಿ ಕಛೇರಿಗೆ ಕೃಷ್ಣಬೈರೇಗೌಡ ದಿಢೀರ್ ಭೇಟಿ, ಅಧಿಕಾರಿಗಳ ಗೈರು, ಉಡಾಫೆ ಉತ್ತರಕ್ಕೆ ಸಚಿವರ ತರಾಟೆ

ದೊಡ್ಡಬಳ್ಳಾಪುರ: ತಾಲೂಕಿನ ತಹಶೀಲ್ದಾರ್ ಮತ್ತು ಉಪ ವಿಭಾಗಾಧಿಕಾರಿ ಕಚೇರಿಯ ಭ್ರಷ್ಟಾಚಾರದ ಬಗ್ಗೆ ಸಾಕಷ್ಟು ದೂರುಗಳು ಕೇಳಿ ಬಂದ ಹಿನ್ನೆಲೆ ಇಂದು ಬೆಳಿಗ್ಗೆ ಕಂದಾಯ ಸಚಿವರಾದ ಕೃಷ್ಣಬೈರೇಗೌಡರು ದಿಢೀರ್ ಭೇಟಿ ನೀಡಿದರು. ಈ ವೇಳೆ ಶೇಕಡಾ 90ಕ್ಕೂ ಹೆಚ್ಚು ಅಧಿಕಾರಿಗಳು ಮತ್ತು ಸಿಬ್ಬಂದಿ ಕೆಲಸಕ್ಕೆ ಹಾಜರಾಗದೇ ಇರುವುದನ್ನ ನೋಡಿ ಸರ್ಕಾರಿ ಅವ್ಯವಸ್ಥೆ ನೋಡಿ ಬೇಸರ ವ್ಯಕ್ತಪಡಿಸಿದ್ದಾರೆ.

ಸಚಿವರು ಬಂದ ಸುದ್ದಿ ತಿಳಿದ ತಕ್ಷಣವೇ ಉಪವಿಭಾಗಾಧಿಕಾರಿ ಶುಭ್ರಶ್ರೀ, ವಿದ್ಯಾವಿಭಾ ರಾಥೋಡ್ ಮತ್ತು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಆಗಮಿಸಿದರು. ಸಾರ್ವಜನಿಕರ ಎದುರೇ ಅಧಿಕಾರಿಗಳ ವಿರುದ್ಧ ಬೇಸರ ವ್ಯಕ್ತಪಡಿಸಿದ ಸಚಿವರು ಜನರ ಕೆಲಸಗಳಿಗೆ ಸ್ಪಂದಿಸುವಂತೆ ಸೂಚನೆ ನೀಡಿದರು.

ಭೇಟಿ ನೀಡಿದ ವೇಳೆ ಶೇಕಡಾ 90 ರಷ್ಟು ಅಧಿಕಾರಿಗಳು ಕೆಲಸಕ್ಕೆ ಬಂದಿಲ್ಲ. 11 ಗಂಟೆಯಾದರೂ ಕೆಲವು ಆಫೀಸ್ ಗಳು ಓಪನ್ ಆಗಿಲ್ಲ, ವ್ಯವಸ್ಥೆ ಅವ್ಯವಸ್ಥೆಯಾಗಿ ಕಾಣುತ್ತಿದೆ. ಇದನ್ನ ಮುಚ್ಚಿಡುವುದರಿಂದ ನಮಗೆ ಶೋಭೆ ತರುವುದಿಲ್ಲ, ಆಡಳಿತ ವ್ಯವಸ್ಥೆಯಲ್ಲಿ ಬೇಜವಾಬ್ದಾರಿತನ ಎದ್ದು ಕಾಣುತ್ತಿದೆ. ನಾನು ಬೆಂಗಳೂರಿನಿಂದ ಬಂದಿದ್ದೇನೆ. ಸುದ್ದಿ ತಿಳಿದ ತಕ್ಷಣ ಜಿಲ್ಲಾಧಿಕಾರಿಗಳು ಡಿಸಿ ಆಫೀಸ್ ನಿಂದ ಬಂದಿದ್ದಾರೆ. ಆದರೆ ಇಲ್ಲಿ ಕೆಲಸ ಮಾಡುವ ಅಧಿಕಾರಿಗಳು ಬಂದಿಲ್ಲ. ನಾನು ಬಂದ ಮೇಲೂ ಕೆಲವರು ಹಾಜರಾತಿ ರಿಜಿಸ್ಟರ್ ಗೆ ಸಹಿ ಹಾಕುತ್ತಿದ್ದರು. ಇದು ವಾಸ್ತವ ಚಿತ್ರಣ ನಾನು ಮುಚ್ಚಿಟ್ಟು ಮಾತಾಡ ಬಹುದು. ಆದರೆ ನನಗೆ ಆತ್ಮವಂಚನೆ ಆಗಲಿದೆ ಎಂದರು.

ಸರ್ಕಾರಿ ವ್ಯವಸ್ಥೆಯಲ್ಲಿ ಜನರ ಕೆಲಸಗಳಿಗೆ ಆದ್ಯತೆ ನೀಡಬೇಕು. ಆದರೆ ಇಲ್ಲಿ ಅದು ಕಾಣುತ್ತಿಲ್ಲ, ಕೆಲವು ಪ್ರಾಮಾಣಿಕ ಅಧಿಕಾರಿಗಳಿದ್ದಾರೆ. ಆದರೆ ಕೆಲವು ಅಧಿಕಾರಿಗಳು ನಮಗಾಗಿ ಜನರಿದ್ದಾರೆಂದು ಭಾವಿಸಿದ್ದಾರೆ. ವ್ಯವಸ್ಥೆ ಸರಿ ಇಲ್ಲ ಎಂದು ಜಿಲ್ಲಾಧಿಕಾರಿಗಳಿಗೆ ಹೇಳಿದ್ದೇನೆ. ಸರಿ ಮಾಡುವ ಜವಾಬ್ದಾರಿ ಜಿಲ್ಲಾಧಿಕಾರಿಗಳಿದೆ. ಆಡಳಿತ ವ್ಯವಸ್ಥೆಯೇ ಹೀಗಿರುವಾಗ ಜಿಲ್ಲಾಧಿಕಾರಿ ಒಬ್ಬರಿಂದ ಇದು ಸಾಧ್ಯವಿಲ್ಲ. ಹಾಗಂತ ನಾವು ಅಸಹಾಯಕರಾಗಿರುವುದಕ್ಕೆ ಸಾಧ್ಯವಿಲ್ಲ. ಜಿಲ್ಲಾಧಿಕಾರಿಗಳು ಆಗಾಗ ತಾಲೂಕು ಕಚೇರಿಗಳಿಗೆ ಭೇಟಿ ಕೊಟ್ಟು ಅವ್ಯವಸ್ಥೆಯನ್ನ ಸರಿಪಡಿಸಬೇಕೆಂದು ಸೂಚನೆ ಕೊಟ್ಟಿದ್ದೇನೆ. ಇದನ್ನ ನೋಡಿ ಬೇರೆ ಅಧಿಕಾರಿಗಳು ಸರಿ ಮಾಡಿಕೊಳ್ಳುತ್ತಾರೆಂಬ ನಿರೀಕ್ಷೆ ಇದೆ.

ನಾವು ಮಾತ್ರ ಗಂಭೀರವಾಗಿ ಕೆಲಸ ಮಾಡ್ತಾ ಇದ್ದೇವೆ. ಈ ಅವ್ಯವಸ್ಥೆ ನೋಡಿದಾಗ ಸರಿ ಮಾಡಬೇಕಾದ ದೊಡ್ಡ ಜವಾಬ್ದಾರಿ ನಮ್ಮ ಮೇಲಿದೆ, ನಾವು ಎಷ್ಟು ಮಾಡಿದರೂ ಸಾಲದು ಎಂಬುದಕ್ಕೆ ಇಲ್ಲಿನ ವ್ಯವಸ್ಥೆಯೇ ಸಾಕ್ಷಿಯಾಗಿದೆ ಎಂದರು.

Edited By : Ashok M
PublicNext

PublicNext

26/12/2024 02:15 pm

Cinque Terre

20.47 K

Cinque Terre

1

ಸಂಬಂಧಿತ ಸುದ್ದಿ