ಮಡಿಕೇರಿ: ಇತಿಹಾಸ ಪ್ರಸಿದ್ಧ ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದ ನೂತನ ಪ್ರವೇಶ ದ್ವಾರವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್.ಪೊನ್ನಣ್ಣ ಉದ್ಘಾಟಿಸಿದರು.
ನಂತರ ಮಾತನಾಡಿದ ಅವರು, ಅನಾದಿಕಾಲದಿಂದಲೂ ಪ್ರಸಿದ್ಧವಾದ ಈ ದೇವಸ್ಥಾನಕ್ಕೆ ನೂತನ ಕಾಯಕಲ್ಪ ನೀಡಿರುವುದು ಅತ್ಯಂತ ಖುಷಿಯನ್ನು ನೀಡಿದೆ. ಶ್ರೀ ಪಾಡಿ ಇಗ್ಗುತ್ತಪ್ಪ ದೇವರ ಆಶೀರ್ವಾದ ನಾಡಿನ ಸಮಸ್ತ ಜನರ ಮೇಲೆ ಇರಲಿ ಎಂದು ಹಾರೈಸಿದರು.
ಕೊಡಗು-ಮೈಸೂರು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮಳೆದೇವರು ಎಂದೇ ಪ್ರಸಿದ್ಧಿ ಪಡೆದಿರುವ ಕೊಡಗಿನ ಕುಲದೇವರಾದ ಶ್ರೀ ಇಗ್ಗುತ್ತಪ್ಪ ದೇವರ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ನೂತನ ಪ್ರವೇಶದ್ವಾರ ಸಹಕಾರಿಯಾಗಲಿದೆ. ಪುರಾತನ ಕಾಲದಿಂದಲೂ ಪ್ರಸಿದ್ಧಿ ಪಡೆದಿರುವ ಈ ದೇವಾಲಯ ಅಭಿವೃದ್ಧಿಗೊಳ್ಳುತ್ತಿರುವುದು ಸಂತಸದ ವಿಷಯ. ಇನ್ನೂ ಹೆಚ್ಚಿನ ಕಾಯಕಲ್ಪ ಪಡೆಯುವುದರ ಮೂಲಕ ಭಕ್ತಾದಿಗಳಿಗೆ ಸದುಪಯೋಗವಾಗಲಿ ಎಂದು ಹೇಳಿದರು.
ಜೊತೆಗೆ ಶ್ರೀ ಪಾಡಿ ಇಗ್ಗುತ್ತಪ್ಪ ದೇವರ ಆಶೀರ್ವಾದ ನಾಡಿನ ಸಮಸ್ತ ಜನರ ಮೇಲೆ ಇರುವುದರೊಂದಿಗೆ ನಾಡು ಸುಭಿಕ್ಷವಾಗಿರಲಿ ಎಂದು ಹಾರೈಸಿದರು.
Kshetra Samachara
26/12/2024 03:31 pm