ಮಡಿಕೇರಿ: ಗ್ರಾಮೀಣ ಕ್ರೀಡಾ ಸಂಸ್ಕೃತಿಯ ಪುನರುಜ್ಜೀವನಕ್ಕಾಗಿ 69ನೇ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಮಾನವ ಹಕ್ಕುಗಳ ಅಂತರರಾಷ್ಟ್ರೀಯ ಒಕ್ಕೂಟದ ವತಿಯಿಂದ ವೀರನಾಡು ರಕ್ಷಣಾವೇದಿಕೆಯ ಸಹಯೋಗದಲ್ಲಿ ಸಂಭ್ರಮದ `ಗ್ರಾಮೀಣ ಕ್ರೀಡೋತ್ಸವ' ನಡೆಯಿತು.
ನಗರದ ಗಾಂಧಿ ಮೈದಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೋಲಿ, ಬುಗುರಿ, ಲಗೋರಿ, ಚಕ್ರಗಾಡಿ ತಳ್ಳುವುದು, ಕ್ಯಾಟರ್ ಬಿಲ್ಲಿನಿಂದ ಕಲ್ಲು ಹೊಡೆಯುವುದು, ಕುಂಟೆ ಬಿಲ್ಲೆ, ಚಿಣ್ಣಿದಾಂಡ್, ಮಡಿಕೆ ಒಡೆಯುವು ತೆಂಗಿನ ಕಾಯಿಗೆ ಕಲ್ಲು ಹೊಡೆಯುವುದು, ಕಪ್ಪೆ ಓಟ, ಕಾಳು ಹೆಕ್ಕುವುದು ಮೊದಲಾದ ಗ್ರಾಮೀಣ ಆಟಗಳಲ್ಲಿ ಮಕ್ಕಳು, ವಯೋವೃದ್ಧರು, ಯುವಕ, ಯುವತಿಯರು ಪಾಲ್ಗೊಂಡು ಸಂಭ್ರಮಿಸಿದರು.
ಕಾರ್ಯಕ್ರಮದಲ್ಲಿ ಮಾನವ ಹಕ್ಕುಗಳ ಅಂತರಾಷ್ಟ್ರೀಯ ಒಕ್ಕೂಟದ ರಾಜ್ಯಾಧ್ಯಕ್ಷ ಹರೀಶ್ ಜಿ.ಆಚಾರ್ಯ ಮಾತನಾಡಿ, ಮರೆತು ಹೋಗುತ್ತಿರುವ ಗ್ರಾಮೀಣ ಕ್ರೀಡೆಗಳಿಗೆ ಮರುಜೀವ ತುಂಬುವ ನಿಟ್ಟಿನಲ್ಲಿ ಕ್ರೀಡೋತ್ಸವವನ್ನು ಆಯೋಜಿಸಲಾಗಿದೆ ಇಂದಿನ ಯುವ ಸಮೂಹ ಮೊಬೈಲ್ ಪ್ರಭಾವಕ್ಕೆ ಸಿಲುಕಿ ಕ್ರೀಡಾ ಚಟುವಟಿಕೆಗಳಿಂದ ದೂರ ಸರಿದಿರುವುದಲ್ಲದೆ, ಅವರಿಗೆ ಗ್ರಾಮೀಣ ಆಟೋಟಗಳ ಬಗ್ಗೆ ಮಾಹಿತಿಗಳಿಲ್ಲ. ಗ್ರಾಮೀಣ ಕ್ರೀಡೋತ್ಸವದ ಮೂಲಕ ನಮ್ಮ ಹಳೆಯ ಕ್ರೀಡೆಗಳನ್ನು ಅವರಿಗೆ ಪರಿಚಯಿಸುವ ಪ್ರಯತ್ನ ಮಾಡಲಾಗಿದೆ ಎಂದರು.
ಉದ್ಯಮಿ ಕೆ.ಆರ್.ರವಿ ತೆಂಗಿನ ಕಾಯಿಗೆ ಕಲ್ಲುಹೊಡೆಯುವ ಮುಖಾಂತ ಕ್ರೀಡಾಕೂಟ ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಒಕ್ಕೂಟದ ಗೌರವ ಅಧ್ಯಕ್ಷ ದಾಮೋದರ್, ಮಡಿಕೇರಿ ತಾಲ್ಲೂಕು ಅಧ್ಯಕ್ಷ ಪ್ರದೀಪ್ ಕರ್ಕೆರ, ಡಿವೈಎಸ್‌ಪಿ ಮಹೇಶ್, ಪ್ರಮುಖರಾದ ಪಿ.ಪಿ.ಚಾಮಿ ಹಾಜರಿದ್ದರು. ಒಕ್ಕೂಟದ ಪ್ರಮುಖರಾದ ಕೆ.ಆರ್.ದಿನೇಶ್ ಶೆಟ್ಟಿ, ಪ್ರದೀಪ್ ಕರ್ಕೆರ, ಲಕ್ಷö್ಮಣ್ ಹೊದ್ದೂರು, ಹರಿಣಾಕ್ಷಿ, ಶಭರಿ ಗ್ರಾಮೀಣ ಕ್ರೀಡಾಕೂಟದ ಮೇಲ್ವಿಚಾರಣೆ ವಹಿಸಿದ್ದರು.
PublicNext
26/12/2024 03:41 pm