ಅಣ್ಣಿಗೇರಿ: ಪಟ್ಟಣದಲ್ಲಿ ಅಣ್ಣಿಗೇರಿ ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಉಪಾಧ್ಯಕ್ಷ ಹಾಗೂ ಪದಾಧಿಕಾರಿಗಳ ಆಯ್ಕೆ ಇಂದು ಪಟ್ಟಣದ ರೈತ ಸಂಪರ್ಕ ಕೇಂದ್ರದಲ್ಲಿ ಜರುಗಿತು. ಅಧ್ಯಕ್ಷ ಮತ್ತು ಉಪಾಧ್ಯಕ್ಷ ಹಾಗೂ ಪದಾಧಿಕಾರಿಗಳನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ಅಮೃತಪ್ಪ ಗುರಿಕಾರ್, ಉಪಾಧ್ಯಕ್ಷರಾಗಿ ಪಾಂಡಪ್ಪ ದ್ಯಾವನೂರ್,ಪ್ರಧಾನ ಕಾರ್ಯದರ್ಶಿಯಾಗಿ ಪುರದಪ್ಪ ಹವಾಲ್ದಾರ್,ಖಜಾಂಚಿಯಾಗಿ ನಾಗಲಿಂಗಪ್ಪ ದಳವಾಯಿ, ಜಿಲ್ಲಾ ಪ್ರತಿನಿಧಿಯಾಗಿ ಹನುಮಂತಪ್ಪ ಕಂಬಳಿ ಆಯ್ಕೆಯಾಗಿದ್ದಾರೆ ಎಂದು ಚುನಾವಣೆ ಅಧಿಕಾರಿ ಹಾಗೂ ಕೃಷಿ ನಿರ್ದೇಶಕರಾದ ಶ್ರೀನಾಥ್ ಚಿಮ್ಮಲಗಿ ಅವರು ತಿಳಿಸಿದರು.
ಈ ವೇಳೆ ಪಟ್ಟಣದ ರೈತ ಸಂಪರ್ಕ ಕೇಂದ್ರದ ಅಧಿಕಾರಿ ಕೆ ಎಸ್ ಪಾಟೀಲ್,ನೂತನ ಅಧ್ಯಕ್ಷರು ಉಪಾಧ್ಯಕ್ಷರು ಸದಸ್ಯರು ಸೇರಿದಂತೆ ಸಿಬ್ಬಂದಿಗಳು ಉಪಸ್ಥಿತರಿದ್ದರು.
Kshetra Samachara
26/12/2024 03:54 pm