ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಸಾಗರ: ಪೋಷಕರು ಪ್ರಾಧ್ಯಾಪಕರ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ - ಶಾಸಕ ಬೇಳೂರು

ಸಾಗರ : ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಮತ್ತು ಪೋಷಕರು ಪ್ರಾಧ್ಯಾಪಕರ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ.

ಈ ಕುರಿತು ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ವಿದ್ಯಾರ್ಥಿ ಮತ್ತು ಆತನ ತಂದೆ ಕಾಲೇಜಿನ ಇತಿಹಾಸ ವಿಭಾಗದ ಪ್ರಾಧ್ಯಾಪಕ ಪ್ರೊ. ರಾಜು ಅವರ ಮೇಲೆ ಹಲ್ಲೆ ಮಾಡುವ ಮೂಲಕ ಗುರುಶಿಷ್ಯರ ನಡುವಿನ ಅಮೂಲ್ಯವಾದ ಸಂಬಂಧಕ್ಕೆ ಕೆಟ್ಟ ಹೆಸರು ತಂದಿದ್ದಾರೆ ಎಂದರು.

ಘಟನೆಗೆ ಸಂಬಂಧಪಟ್ಟಂತೆ ವಿದ್ಯಾರ್ಥಿಯನ್ನು ಶಾಲೆಯಿಂದ ಅಮಾನತ್ತು ಮಾಡಲಾಗಿದೆ. ಜೊತೆಗೆ ವಿದ್ಯಾರ್ಥಿ ತಂದೆ ವಿರುದ್ದ ಪೊಲೀಸರಿಗೆ ದೂರು ಸಲ್ಲಿಸಿದ್ದು, ಎಫ್‌ಐಆರ್ ದಾಖಲಾಗಿದೆ. ವಿದ್ಯಾರ್ಥಿ ತಂದೆ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದಾರೆ ಎನ್ನುವ ಮಾಹಿತಿ ಇದ್ದು ಸಂಬಂಧಪಟ್ಟ ಸಚಿವರಿಗೆ ಉಪನ್ಯಾಸಕರ ಅನುಚಿತ ವರ್ತನೆ ಕುರಿತು ಮಾಹಿತಿ ನೀಡಿ ಅಮಾನತ್ತು ಮಾಡುವಂತೆ ಮನವಿ ಮಾಡಲಾಗುತ್ತದೆ ಎಂದು ಹೇಳಿದರು.

ಎಲ್ಲಾ ಶಾಲಾಕಾಲೇಜುಗಳಲ್ಲಿ ಮುಂದೆ ಇಂತಹ ಘಟನೆ ನಡೆಯದಂತೆ ಸೂಕ್ತ ಕ್ರಮ ವಹಿಸಲು ಸಂಬಂಧಪಟ್ಟವರಿಗೆ ಸೂಚನೆ ನೀಡಲಾಗಿದೆ. ವಿದ್ಯಾರ್ಥಿಯಾಗಿರಲೀ, ಪೋಷಕರಾಗಲಿ ಶಾಲಾಕಾಲೇಜುಗಳಲ್ಲಿ ಸಂಯುಮದಿಂದ ವರ್ತಿಸಬೇಕು. ಹಲ್ಲೆ ಮಾಡುವುದು, ಅಶ್ಲೀಲ ಪದ ಬಳಸಿ ಬೈಯುವುದು ನಮ್ಮ ಸಂಸ್ಕೃತಿಯಲ್ಲ. ಶಾಲಾಕಾಲೇಜಿನ ಮುಖ್ಯಸ್ಥರ ಬಳಿ ಸಮಸ್ಯೆ ತಿಳಿಸಿ ಪರಿಹಾರ ಕಂಡುಕೊಳ್ಳಬೇಕು ಎಂದು ತಿಳಿಸಿದ್ದಾರೆ.

Edited By : PublicNext Desk
Kshetra Samachara

Kshetra Samachara

26/12/2024 04:04 pm

Cinque Terre

1.94 K

Cinque Terre

0

ಸಂಬಂಧಿತ ಸುದ್ದಿ