ಶಿವಮೊಗ್ಗ : ಜಿಲ್ಲೆಯ ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲಿ ಗುರುತಿಸಲಾಗಿರುವ Black spot ಗಳಲ್ಲಿ ಸಂಭವನೀಯ ಅಪಘಾತಗಳನ್ನು ತಡೆಗಟ್ಟಲು ಕಟ್ಟುನಿಟ್ಟಾಗಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಪ್ರಭಾರಿ ಜಿಲ್ಲಾಧಿಕಾರಿ ಹಾಗೂ ಜಿ.ಪಂ ಸಿಇಓ ಹೇಮಂತ್ ಎನ್ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಅವರು Black spot ಗಳನ್ನು ಸರಿಪಡಿಸಲು ತುರ್ತು ಕಾಮಗಾರಿ ಎಂದು ಪರಿಗಣಿಸಿ ಕಟ್ಟುನಿಟ್ಟಾದ ಕ್ರಮ ಕೈಗೊಳ್ಳಬೇಕು. ವಿಫಲವಾದಲ್ಲಿ ಸಂಬಂಧಿಸಿದ ಎಲ್ಲ ಇಂಜಿನಿಯರಿಂಗ್ ಇಲಾಖೆಗಳ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದರು.
ಜಿಲ್ಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಮತ್ತು ರಾಜ್ಯ ಹೆದ್ದಾರಿ ಒಳಗೊಂಡಂತೆ 2016 ರಿಂದ ಇಲ್ಲಿಯವರೆಗೆ ಒಟ್ಟು 51 ಬ್ಲಾಕ್ ಸ್ಪಾಟುಗಳನ್ನು ಗುರುತಿಸಲಾಗಿದೆ. 37 Black spot ಗಳು ಎನ್‌ಹೆಚ್ ಗಳ ವ್ಯಾಪ್ತಿಗೆ ಬರಲಿವೆ. ಇನ್ನುಳಿದವರು ಎಸ್‌ಹೆಚ್ ಗಳ ವ್ಯಾಪ್ತಿಗೆ ಬರಲಿದ್ದು, ಮುಂದಿನ 2 ತಿಂಗಳುಗಳಲ್ಲಿ ಸೂಕ್ತ ಕ್ರಮ ಕೈಗೊಂಡು ಸರಿಪಡಿಸಬೇಕು.
ಎಚ್ಚರಕೆ ಫಲಕ, ಸ್ಪೀಡ್ ಬ್ರೇಕರ್, ರಿಫ್ಲೆಕ್ಟರ್ ಸ್ಟಡ್, ಅಪಾಯ ಸೂಚಿಸುವ ಫಲಕ, ಕ್ಯಾಟ್‌ಐ ಇತ್ಯಾದಿ ಕ್ರಮ ಕೈಗೊಳ್ಳಬೇಕು ಹಾಗೂ ಅರಣ್ಯ ಇಲಾಖೆ, ಟ್ರಾಫಿಕ್ ಪೊಲೀಸ್ ಮತ್ತು ಆರ್‌ಟಿಓ ಇಲಾಖೆ ಜಂಟಿಯಾಗಿ ತಾಲ್ಲೂಕು ಮತ್ತು ಜಿಲ್ಲೆಯಲ್ಲಿ ತಂಡ ರಚಿಸಿಕೊಂಡು ರಸ್ತೆ ಬದಿಯ ಸಿಗ್ನಲ್ ಲೈಟ್‌ಗೆ ಅಡ್ಡ ಬೆಳೆದಿರುವ ಮರಗಳನ್ನು ಕತ್ತರಿಸುವ ಅಥವಾ ತೆರವುಗೊಳಿಸಲು ಕ್ರಮ ವಹಿಸಬೇಕು ಎಂದರು.
Kshetra Samachara
26/12/2024 04:11 pm