ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿತ್ರದುರ್ಗ: ಮಕ್ಕಳ ರಕ್ಷಣಾ ನೀತಿ ಪರಿಣಾಮಕಾರಿ ಅನುಷ್ಟಾನ ಖಾತ್ರಿ ಪಡಿಸುವ ಅಗತ್ಯ

ಚಿತ್ರದುರ್ಗ: ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಲ್ಲಿ, 'ಮಕ್ಕಳ ರಕ್ಷಣಾ ನೀತಿ 2016' ಪರಿಣಾಮಕಾರಿ ಅನುಷ್ಟಾನ ಖಾತ್ರಿ ಪಡಿಸುವ ಅಗತ್ಯವಿದೆ ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ, ಕೆ.ಟಿ.ತಿಪ್ಪೇಸ್ವಾಮಿ ನಿರ್ದೇಶಿಸಿದ್ದಾರೆ.

ಈ ಬಗ್ಗೆ ಹೇಳಿಕೆ ನೀಡಿರುವ ಅವರು ಮಕ್ಕಳ ಹಕ್ಕುಗಳ ರಕ್ಷಣೆಗೆ ಇರುವ ಕಾಯಿದೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಇಲಾಖೆ ಗಳು ಸಮನ್ವಯತೆ ಯಿಂದ ಕಾರ್ಯನಿರ್ವಹಿಸುವ ಜೊತೆಗೆ ಮಕ್ಕಳ ಜೀವನ ಮಟ್ಟವನ್ನು ಉತ್ತಮ ಗೊಳಿಸಲು ಅಧಿಕಾರಿಗಳು ಕ್ರಿಯಾಶೀಲರಾಗಿ ಕರ್ತವ್ಯ ನಿರ್ವಹಿಸಬೇಕು ಎಂದರು.

ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಖಾಸಗಿ ಹಾಗೂ ಸರಕಾರಿ ಶಾಲೆಗಳಲ್ಲಿರುವ ವಾಹನ ಚಾಲಕರ ವರದಿಯನ್ನು ನೀಡುವಂತೆ ಸೂಚಿಸಿದ ಅವರು, ಜಿಲ್ಲೆಯ ಎಲ್ಲಾ ಶಾಲೆಗಳಲ್ಲಿ, ಶೈಕ್ಷಣಿಕ ಸಂಸ್ಥೆಗಳಲ್ಲಿ ಹಾಗೂ ವಸತಿ ನಿಲಯಗಳಲ್ಲಿ ಮಕ್ಕಳ ರಕ್ಷಣಾ ನೀತಿಯನ್ನು ಪರಿಣಾಮಕಾರಿ ಪ್ರತಿಶತಃ ನೂರರಷ್ಟು ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕು ಎಂದರು....

Edited By : PublicNext Desk
Kshetra Samachara

Kshetra Samachara

26/12/2024 05:06 pm

Cinque Terre

900

Cinque Terre

0

ಸಂಬಂಧಿತ ಸುದ್ದಿ