ಚಿತ್ರದುರ್ಗ: ಡಿಸೆಂಬರ್ 31ರ ಮಂಗಳವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ರವರೆಗೆ ನಗರದ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ನೇಮಕಾತಿ ಸಂದರ್ಶನ ನಡೆಯಲಿದೆ.
ಮೂರಕ್ಕೂ ಹೆಚ್ಚು ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಎಸ್.ಎಸ್.ಎಲ್.ಸಿ, ಪಿಯುಸಿ, ಡಿಪ್ಲೋಮೋ, ಐಟಿಐ, ಯಾವುದೇ ಪದವಿ ಹೊಂದಿರುವ 18 ರಿಂದ 30 ವರ್ಷದೊಳಗಿನ ಪುರುಷ ಅಥವಾ ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿದ್ದು, ಅಭ್ಯರ್ಥಿಗಳು 5 ಬಯೋಡಾಟಾ ಪ್ರತಿ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು ಹಾಗೂ ಫೋಟೊಗಳೊಂದಿಗೆ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ನಗರದ ಸ್ಟೇಡಿಯಂ ತಿರುವು, ಹಳೇ ವೈಶಾಲಿ ಗೇಟ್ ಹತ್ತಿರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಕಚೇರಿ ದೂರವಾಣಿ ಸಂಖ್ಯೆ 7022459064, 8105619020, 9945587060, 9964528212, 7019755147 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.
PublicNext
26/12/2024 05:31 pm