ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಬೆಳಗಾವಿ: ಕಾಂಗ್ರೆಸ್ ನಿಂದ ಭಾರತದ ನಕ್ಷೆಗೆ ಅವಮಾನ- ಬಿಜೆಪಿ ನಾಯಕರ ಆಕ್ರೋಶ

ಬೆಳಗಾವಿ: ಕಾಂಗ್ರೆಸ್ ಅಧಿವೇಶನದ ಶತಮಾನೋತ್ಸವ ಸಂದರ್ಭದಲ್ಲಿ ಕಾಂಗ್ರೆಸ್ ನಿಂದ ಭಾರತದ ನಕ್ಷೆಗೆ ಅವಮಾನ ಮಾಡಿದ ಘಟನೆ ಬೆಳಗಾವಿ ನಗರದಲ್ಲಿ ನಡೆದಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಮಾಜಿ ಶಾಸಕರು, ಕಾರ್ಯಕರ್ತರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಸ್ವಾಗತಕ್ಕೆ ಹಾಕಲಾಗಿದ್ದ ಬ್ಯಾನರ್ ನಲ್ಲಿ ಭಾರತದ ಭೂಪಟದ ಜಮ್ಮು ಕಾಶ್ಮೀರ ಭಾಗವನ್ನು ಅರ್ಧ ಹಾರಿಸಿದ್ದಾರೆ‌. ಪಾಕ್ ಆಕ್ರಮಿತ ಕಾಶ್ಮೀರ ಭಾಗವನ್ನು ಮರಳಿ ಪಡೆಯುವ ನಿಟ್ಟಿನಲ್ಲಿ ಭಾರತೀಯರು ನಿರಂತರ ಆಗ್ರಹ ಮಾಡುತ್ತಿರುವ ಸಂದರ್ಭದಲ್ಲಿ ಕಾಂಗ್ರೆಸ್ ನಿಂದ ನಕ್ಷೆಗೆ ಅವಮಾನವಾಗಿದೆ ಎಂದು ಬಿಜೆಪಿ ಖಂಡಿಸಿದೆ.

ಈ ರೀತಿಯ ಭಾರತ ನಕ್ಷೆ ಕೇವಲ ಪಾಕಿಸ್ತಾನ, ಚೀನಾದಲ್ಲಿ ಮಾತ್ರ ಕಾಣ ಸಿಗುತ್ತದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಮಾಜಿ ಶಾಸಕರು, ಕಾರ್ಯಕರ್ತರು ತೀವ್ರವಾಗಿ ಖಂಡಿಸಿದ್ದಾರೆ. ಬೆಳಗಾವಿ ಗ್ರಾಮೀಣ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ಸಂಜಯ್ ಪಾಟೀಲ್ ಸೇರಿದಂತೆ ಹಲವರು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ.

Edited By : Shivu K
PublicNext

PublicNext

26/12/2024 06:00 pm

Cinque Terre

25.63 K

Cinque Terre

6

ಸಂಬಂಧಿತ ಸುದ್ದಿ