ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಾವೇರಿ: ಹಾನಗಲ್ಲ ಪಟ್ಟಣದಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ

ಹಾನಗಲ್ಲ: ಹಾನಗಲ್ಲ ಪಟ್ಟಣದಲ್ಲಿ ಎಲ್ಲೆಂದರಲ್ಲಿ ವಾಹನ ನಿಲ್ಲಿಸುತ್ತಿರುವುದರಿಂದ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿದೆ. ವಾಹನ ದಟ್ಟಣೆ ನಿತ್ಯವೂ ಹೆಚ್ಚುತ್ತಿದ್ದು, ಟ್ರಾಫಿಕ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಮೂಲಕ ಸಾರ್ವಜನಿಕರು ಹಾಗೂ ಪ್ರಯಾಣಿಕರಿಗೆ ತೊಂದರೆಯಾಗದಂತೆ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸುವಂತೆ ಶಾಸಕ ಶ್ರೀನಿವಾಸ ಮಾನೆ ಅವರು ಪೊಲೀಸ್ ಅಧಿಕಾರಿಗಳಿಗೆ ಸೂಚಿಸಿದರು.

ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪಟ್ಟಣ ವ್ಯಾಪ್ತಿಯ 34 ಸಾರ್ವಜನಿಕ ಸ್ಥಳಗಳಲ್ಲಿ ಪುರಸಭೆಯ 15 ನೇ ಹಣಕಾಸು ಯೋಜನೆಯಡಿ 20 ಲಕ್ಷ ರೂ. ವೆಚ್ಚದಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮರಾಗಳ ದೃಶ್ಯಾವಳಿ ಭಿತ್ತರಿಸುವ ಟಿವಿ ಉದ್ಘಾಟಿಸಿ ಅವರು ಮಾತನಾಡಿದರು. ನಗರದಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಇತ್ತೀಚಿಗೆ ವಾಹನ ಓಡಾಟ ಹೆಚ್ಚಿರುವ ಕಾರಣ ಸಮಸ್ಯೆ ಸೃಷ್ಟಿಯಾಗುತ್ತಿದ್ದು, ಅಗತ್ಯ ಕ್ರಮ ಕೈಗೊಳ್ಳಲು ಮುಂದಾಗಿ. ವ್ಯಾಪಾರಸ್ಥರು, ಪ್ರಮುಖರ ಸಭೆ ಕರೆದು ನಿರ್ಣಯ ಕೈಗೊಳ್ಳಿ. ವ್ಯಾಪಾರ, ವಹಿವಾಟು ಹಾಗೂ ಸುಗಮ ಸಂಚಾರಕ್ಕೆ ಅನುಕೂಲವಾಗುವಂತೆ ಕಾಳಜಿ ವಹಿಸಿ ಎಂದು ಸೂಚಿಸಿದರು.

ಸಿಸಿಟಿವಿಗಳಿಂದ ಪಟ್ಟಣದ ಸಾರ್ವಜನಿಕ ಸ್ಥಳಗಳಲ್ಲಿನ ಚಟುವಟಿಕೆಗಳ ಮೇಲೆ ನಿಗಾ ಇಡಲು ಅನುಕೂಲವಾಗಲಿದೆ. ಅಪರಾಧ ಚಟುವಟಿಕೆ ನಿಯಂತ್ರಿಸಲು, ತನಿಖೆ ನಡೆಸಲು, ಟ್ರಾಫಿಕ್ ತಡೆಯಲು ಸಹಾಯವಾಗಲಿದೆ. ಜಾತ್ರೆ, ಸಭೆ, ಸಮಾರಂಭಗಳಲ್ಲಿ ಪುಂಡರ ಹಾವಳಿಯನ್ನೂ ತಡೆಯಬಹುದಾಗಿದೆ. ಸಾರ್ವಜನಿಕ ಸ್ಥಳಗಳನ್ನೂ ಲೆಕ್ಕಿಸದೇ ಎಲ್ಲೆಂದರಲ್ಲಿ ಕಸ ಎಸೆದು ಗಲೀಜು ಮಾಡುವರ ಮೇಲೆ ಹದ್ದಿನ ಕಣ್ಣಿಡುವಂತೆ ಪುರಸಭೆ ಮುಖ್ಯಾಧಿಕಾರಿ ವೈ.ಕೆ.ಜಗದೀಶ್ ಅವರಿಗೆ ಶಾಸಕ ಮಾನೆ ಸೂಚಿಸಿದರು.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಲಕ್ಷಣ ಶಿರಕೋಳ, ಸಿಪಿಐ ಆಂಜನೇಯ, ಪಿಎಸ್‌ಐ ಸಂಪತ್ ಆನಿಕವಿ, ಆಡೂರು ಪಿಎಸ್‌ಐ ಶರಣಪ್ಪ ಅಂಡರಗಲ್, ಪುರಸಭೆ ಅಧ್ಯಕ್ಷೆ ಮಮತಾ ಆರೆಗೊಪ್ಪ, ಉಪಾಧ್ಯಕ್ಷೆ ವೀಣಾ ಗುಡಿ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ವಿಜಯಕುಮಾರ ದೊಡ್ಡಮನಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತಪ್ಪ ಮರಗಡಿ, ನಗರ ಕಾಂಗ್ರೆಸ್ ಅಧ್ಯಕ್ಷ ಮತೀನ್ ಶಿರಬಡಗಿ, ಮುಖಂಡರಾದ ಆದರ್ಶ ಶೆಟ್ಟಿ, ಈರಣ್ಣ ಬೈಲವಾಳ, ಪುರಸಭೆ ಮಾಜಿ ಅಧ್ಯಕ್ಷ ಖುರ್ಷಿದ್‌ಅಹ್ಮದ್ ಹುಲ್ಲತ್ತಿ, ಸದಸ್ಯರಾದ ಪರಶುರಾಮ ಖಂಡೂನವರ, ಶೋಭಾ ಉಗ್ರಣ್ಣನವರ, ಮಹೇಶ ಪವಾಡಿ, ಶಿವು ಭದ್ರಾವತಿ ಸೇರಿದಂತೆ ಇನ್ನೂ ಹಲವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

26/12/2024 06:34 pm

Cinque Terre

3.06 K

Cinque Terre

0