ಮೊಳಕಾಲ್ಮುರು:ತಾಲೂಕಿನ ಬಿಜಿಕರೆ ಗ್ರಾಮದಲ್ಲಿ ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವದ ಅಂಗವಾಗಿ ಸ್ವಾಮಿಯ ಅಡ್ಡಪಲ್ಲಕ್ಕಿ ಮಹೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.
ಪ್ರತಿವರ್ಷದಂತ ರಥೋತ್ಸವದ ನಂತರ ಓಕಳಿ ಕಾರ್ಯಕ್ರಮ ಹಮ್ಮಿಕೊಂಡಿದ್ದ ಭಕ್ತರು ನಾನಾ ಧಾರ್ಮಿಕ ಆಚರಣೆಗಳನ್ನು ಕೈಗೊಂಡಿದ್ದರು. ಮಧ್ಯಾಹ್ನ ಮುತ್ತಿನ ಪಲ್ಲಕ್ಕಿಗೆ ವಿಶೇಷವಾದ ಹೂವುಗಳಿಂದ ಅಲಂಕರಿಸಿ ಸ್ವಾಮಿಯ ವಿಗ್ರಹವನ್ನು ಪ್ರತಿಷ್ಠಾಪಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.
ಮೆರವಣಿಗೆ ಸಮಯದಲ್ಲಿ ನಾನಾ ಗ್ರಾಮಗಳಿಂದ ಆಗಮಿಸಿದ್ದ ಭಕ್ತರು ಹರಕೆ ತೀರಿಸಿ ವಿಶೇಷ ಪೂಜೆ ಸಲ್ಲಿಸುತ್ತಿದ್ದದ್ದು ಸಾಮಾನ್ಯವಾಗಿತ್ತು. ಮರವಣಿಗೆಯಲ್ಲಿ ವೀರಗಾಸೆ ಕುಣಿತ, ನಂದಿಕೋಲು, ಡೊಳ್ಳು ಕುಣಿತ ನೋಡುಗರ ಗಮನ ಸೆಳೆದವು.
Kshetra Samachara
26/12/2024 07:15 pm