ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಚಿಕ್ಕಮಗಳೂರು: ಡಿಸೆಂಬರ್ 29ರಂದು ರಾಷ್ಟಕವಿ ಕುವೆಂಪು ಜನ್ಮದಿನಾಚರಣೆ - ಮಾಜಿ ಸಚಿವ ಬಿ.ಬಿ.ನಿಂಗಯ್ಯ

ಚಿಕ್ಕಮಗಳೂರು: ನಗರದ ಹೊರವಲಯದ ತೇಗೂರಿನಲ್ಲಿರುವ ಡಾ|ಬಿ.ಆರ್.ಅಂಬೇಡ್ಕರ್ ಅಧ್ಯಯನ ಸಂಸ್ಥೆಯಲ್ಲಿ, ಪ್ರಗತಿಪರ ಸಂಘಟನೆಗಳ ಸಹಯೋಗದಲ್ಲಿ ಡಿಸೆಂಬರ್ 29 ರಂದು ರಾಷ್ಟಕವಿ ಕುವೆಂಪು ಅವರ ಜನ್ಮದಿನಾಚರಣೆ ಆಚರಿಸಲಾಗುವುದು ಎಂದು ಅಧ್ಯಯನ ಸಂಸ್ಥೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಬಿ.ಬಿ.ನಿಂಗಯ್ಯ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಅಂದು ನಡೆಯುವ ಕಾರ್ಯಕ್ರಮವನ್ನು ಶಾಸಕ ಹೆಚ್.ಡಿ.ತಮ್ಮಯ್ಯ ಉದ್ಘಾಟಿಸುವರು. ಮಕ್ಕಳ ವೈದ್ಯ ಡಾ. ಜೆ.ಪಿ.ಕೃಷ್ಣೇಗೌಡ ಕುವೆಂಪು ಭಾವಚಿತ್ರ ಅನಾವರಣಗೊಳಿಸುವರು. ಎಚ್.ಎಂ.ರುದ್ರಸ್ವಾಮಿ ಪ್ರಾಸ್ತಾವಿಕವಾಗಿ ಮಾತನಾಡುವರು. ಅಂಕಣಕಾರ ಬಿ.ಚಂದ್ರೇಗೌ ಪ್ರಧಾನಭಾಷಣ ಮಾಡುವರು ಎಂದರು.

ಮೂಡಿಗೆರೆ ಕ್ಷೇತ್ರದ ಶಾಸಕಿ ನಯನ ಮೋಟಮ್ಮ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ| ಕೆ.ಪಿ. ಅಂಶುಮಂತ್, ರಾಜ್ಯ ಪರಿಸರ ಮಾಲಿನ್ಯ ಮಂಡಳಿ ತಜ್ಞ ಮೌಲ್ಯ ನಿರ್ಧರಣಾ ಸಮಿತಿ ಅಧ್ಯಕ್ಷ ಎ.ಎನ್.ಮಹೇಶ್, ರಾಜ್ಯ ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತುನಿಗಮ ಅಧ್ಯಕ್ಷ ಬಿ.ಎಚ್.ಹರೀಶ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ. ಶಿವಾನಂದಸ್ವಾಮಿ, ಕೆಪಿಸಿಸಿ ವಕ್ತಾರ ಎಚ್.ಎಚ್.ದೇವರಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಪಿ.ಮಂಜೇಗೌಡ, ಶರಣಸಾಹಿತ್ಯ ಪರಿಷತ್ ಅಧ್ಯಕ್ಷ ರವೀಶ್ ಬಸಪ್ಪ, ರೈತಸಂಘದ ಜಿಲ್ಲಾಧ್ಯಕ್ಷ ಗುರುಶಾಂತಪ್ಪ, ಭಾರತೀಯ ಬೌದ್ಧಮಹಾಸಭಾ ಅಧ್ಯಕ್ಷ ಅನಿಲ್ ಕುಮಾರ್, ಜೆಡಿಎಸ್ ಮುಖಂಡ ಎಚ್.ಎಸ್.ಮಂಜಪ್ಪ, ಬಿಎಸ್‌ಪಿ ಜಿಲ್ಲಾಧ್ಯಕ್ಷ ಪಿ.ಪರಮೇಶ್ ಪಾಲ್ಗೊಳ್ಳಲಿದ್ದಾರೆ ಎಂದು ಹೇಳಿದರು. ಸರ್ವಜನಾಂಗದ ಶಾಂತಿಯ ತೋಟ ಘೋಷವಾಕ್ಯದೊಂದಿಗೆ ವಿಶ್ವಮಾನವ ಸಂದೇಶ ಸಾರಿದ ಕುವೆಂಪು ಅವರ ಜನ್ಮ ದಿನಾ ಚರಣೆಯನ್ನು ಭಗವಾನ್ ಬುದ್ಧವಿಹಾರದಲ್ಲಿ ದಾರ್ಶನಿಕರ ಜಯಂತಿ ಆಚರಿಸಲಾಗುತ್ತಿದೆ. ಬುದ್ಧ, ಬಸವ, ಅಂಬೇಡ್ಕರ್ ಜಯಂತಿ ಆಚರಿಸಲಾಗಿದೆ. ಮುಂದಿನ ವರ್ಷ ಕನಕಜಯಂತಿ ಬಳಿಕ ನಾರಾಯಣಗುರುಗಳ ಜಯಂತಿಯನ್ನು ಆಚರಿಸಲಾಗುವುದು ಎಂದು ತಿಳಿಸಿದರು.

Edited By : PublicNext Desk
PublicNext

PublicNext

26/12/2024 07:27 pm

Cinque Terre

13.77 K

Cinque Terre

0

ಸಂಬಂಧಿತ ಸುದ್ದಿ