ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಉಡುಪಿ: ಅಟಲ್ ಬಿಹಾರಿ ವಾಜಪೇಯಿ ಜನ್ಮ ಶತಾಬ್ದಿ ಆಚರಣೆ - ಸಾಧಕರಿಗೆ ಸನ್ಮಾನ

ಉಡುಪಿ: ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮ ಶತಾಬ್ದಿ ಆಚರಣೆ ನಡೆಯಿತು.ಇದರ ಅಂಗವಾಗಿ, ಥೈಲ್ಯಾಂಡ್ ನ ಪಟ್ಟಾಯದಲ್ಲಿ ನಡೆದ 6ನೇ ವರ್ಷದ ಅಂತರರಾಷ್ಟ್ರೀಯ ಯೋಗ ಸ್ಪರ್ಧೆಯಲ್ಲಿ ಭಾರತದಿಂದ 11 ರಿಂದ 15 ವರ್ಷದ ವಯೋ ವಿಭಾಗದಲ್ಲಿ ಪ್ರತಿನಿಧಿಸಿ, ಚಿನ್ನದ ಪದಕ ಪಡೆದು ಪ್ರಥಮ ಸ್ಥಾನಿಯಾಗಿರುವ ಧನ್ವಿ ಪೂಜಾರಿ ಮರವಂತೆ, ಬೆಳ್ಳಿ ಪದಕ ಪಡೆದಿರುವ ಸುಷ್ಮಾ ತೆಂಡೂಲ್ಕರ್ ಹಾಗೂ ಅನನ್ಯ ಇವರನ್ನು ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

Edited By : PublicNext Desk
Kshetra Samachara

Kshetra Samachara

26/12/2024 07:59 pm

Cinque Terre

750

Cinque Terre

0

ಸಂಬಂಧಿತ ಸುದ್ದಿ