ಬೆಳಗಾವಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ಬೆಳಗಾವಿಯಲ್ಲಿ 1924ರಲ್ಲಿ ನಡೆದ ಕಾಂಗ್ರೆಸ್ ಅಧಿವೇಶನನದ ಶತಮಾನೋತ್ಸವ ಆಚರಣೆ ಹಿನ್ನೆಲೆ ಬೆಳಗಾವಿ ನಗರದಲ್ಲಿ ವಿಶೇಷವಾಗಿ ರೂಪಿಸಿರುವ ಸರಸ್ ಮೇಳ ಮತ್ತು ಖಾದಿ ಉತ್ಸವ, ವಸ್ತು ಪ್ರದರ್ಶನ ಮತ್ತು ಮಾರಾಟ ಮೇಳಕ್ಕೆ ಸಿಎಂ ಸಿದ್ದರಾಮಯ್ಯ ವಿದ್ಯುಕ್ತ್ ಚಾಲನೆ ನೀಡಿದರು.
ಬೆಳಗ್ಗೆ ನಗರದ ಟಿಳಕವಾಡಿಯಲ್ಲಿನ ವೀರಸೌಧದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ನೇರವಾಗಿ
ಸರ್ದಾರ್ ಹೈಸ್ಕೂಲ್ ಮೈದಾನಕ್ಕೆ ಆಗಮಿಸಿದ ಸಿಎಂ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ ಹಾಗೂ ಇನ್ನೀತರ ಗಣ್ಯರು ಆತ್ಮೀಯವಾಗಿ ಬರಮಾಡಿಕೊಂಡರು.
ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಶತಮಾನೋತ್ಸವ ಸಮಿತಿಯ ಅಧ್ಯಕ್ಷರು ಹಾಗೂ ಸಚಿವರಾದ ಎಚ್.ಕೆ.ಪಾಟೀಲ್ , ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ, ಕೆ.ಎಚ್.ಮುನಿಯಪ್ಪ, ಲಕ್ಷ್ಮಿ ಹೆಬ್ಬಾಳಕರ, ಎಂ.ಬಿ.ಪಾಟೀಲ, ಡಾ. ಎಂ.ಸಿ.ಸುಧಾಕರ, ದಿನೇಶ್ ಗುಂಡೂರಾವ್, ಭೈರತಿ ಸುರೇಶ, ಶಾಸಕರಾದ ಆರ್ ವಿ ದೇಶಪಾಂಡೆ, ದೆಹಲಿಯ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ, ಮಾಜಿ ಸಿಎಂ ಎಂ.ವೀರಪ್ಪ ಮೊಯ್ಲಿ ಸೇರಿದಂತೆ ಹಲವಾರು ಗಣ್ಯರೊಂದಿಗೆ ಮುಖ್ಯಮಂತ್ರಿಗಳು ಬೆಳಗಾವಿ ನಗರದಲ್ಲಿ ಸ್ವ-ಸಹಾಯ ಗುಂಪಿನ ಮಹಿಳೆಯರ ಉತ್ಪನ್ನಗಳು ಹಾಗೂ ಖಾದಿ ಉತ್ಪನ್ನಗಳ ಬೃಹತ್ ಪ್ರದರ್ಶನ ಮತ್ತು ಮಾರಾಟ ಮೇಳ 'ಅಸ್ಮಿತೆ' ವ್ಯಾಪಾರ ಮೇಳ-2024ವನ್ನು ಉದ್ಘಾಟಿಸಿದರು.
ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ರಾಜ್ಯ ಜೀವನೋಪಾಯ ಅಭಿಯಾನ ಮತ್ತು ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ ಮತ್ತು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಾನಗರ ಪಾಲಿಕೆ ಸಹಭಾಗಿತ್ವದಲ್ಲಿ ಈ ಸರಸ್ ಮೇಳ ಮತ್ತು ಖಾದಿ ಉತ್ಸವವು ಆರಂಭವಾಗಿದ್ದು, ಡಿ.26ರಿಂದ ಜನವರಿ 04ರವರೆಗೆ ನಡೆಯಲಿದೆ.
PublicNext
26/12/2024 08:21 pm